ರಾಜ್ಯಸಭೆ ಕಲಾಪ 
ದೇಶ

ವಿಪಕ್ಷಗಳ ಸಂಸದರು ಕ್ಷಮೆ ಕೋರಿದಲ್ಲಿ ಅಮಾನತು ಆದೇಶ ವಾಪಸ್: ಪ್ರಹ್ಲಾದ್ ಜೋಶಿ

ರಾಜ್ಯಸಭೆಯಿಂದ ಅಮಾನತುಗೊಂಡಿರುವ ಸಂಸದರು ಕ್ಷಮೆ ಕೋರಿದಲ್ಲಿ ಅಮಾನತು ಆದೇಶವನ್ನು ಹಿಂಪಡೆಯಲಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 

ನವದೆಹಲಿ: ರಾಜ್ಯಸಭೆಯಿಂದ ಅಮಾನತುಗೊಂಡಿರುವ ಸಂಸದರು ಕ್ಷಮೆ ಕೋರಿದಲ್ಲಿ ಅಮಾನತು ಆದೇಶವನ್ನು ಹಿಂಪಡೆಯಲಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 

ಇಂದು ಪ್ರಧಾನಿ ನರಂದ್ರ ಮೋದಿ ಭಾಗವಹಿಸಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸಚಿವರುಗಳು ಸಂಸದರ ಅಮಾನತು ಆದೇಶದ ಬಗ್ಗೆ ವಿವರಣೆ ನೀಡಿದ್ದಾರೆ ಎಂದೂ ಜೋಶಿ ತಿಳಿಸಿದ್ದಾರೆ.

ನಾವು ಸಂಸದರನ್ನು ಏಕೆ ಅಮಾನತು ಮಾಡಲಾಯಿತು ಎಂಬುದನ್ನು ವಿವರಿಸಿದ್ದೇವೆ. ಏನಾಯಿತು ಎಂಬುದನ್ನು ದೇಶವೇ ನೋಡಿದೆ. ದಾಖಲೆಗಳಲ್ಲಿದೆ. ಅವರು ಇಂದಿಗೂ ಕ್ಷಮೆ ಕೇಳಿದರೆ ನಾವು ಅಮಾನತು ಆದೇಶವನ್ನು ಹಿಂಪಡೆಯುವುದಕ್ಕೆ ಸಿದ್ಧರಿದ್ದೇವೆ ಎಂದು ಜೋಶಿ ಸಂಸದೀಯ ಮಂಡಳಿ ಸಭೆಯ ಬಳಿಕ ತಿಳಿಸಿದ್ದಾರೆ. 

ಮುಂಗಾರು ಅಧಿವೇಶನದ ಕೊನೆಯ ದಿನದಂದು ಸಂಸತ್ ನಲ್ಲಿ ತೀವ್ರ ಗದ್ದಲ ಉಂಟುಮಾಡಿದ್ದ ಕಾರಣ ವಿಪಕ್ಷಗಳ 12 ಸಂಸದರನ್ನು ಚಳಿಗಾಲದ ಉಳಿದ ಅಧಿವೇಶನದ ರಾಜ್ಯಸಭೆಯ ಕಲಾಪದಿಂದ ಅಮಾನತುಗೊಳಿಸಲಾಗಿತ್ತು. ಇದೇ ವೇಳೆ, ಬಿಜೆಪಿ ಸಂಸದೀಯ ಮಂಡಳಿ ಸಭೆಯ ಬಗ್ಗೆ ವಿವರ ನೀಡಿರುವ ಅವರು, ಪದ್ಮ ಪ್ರಶಸ್ತಿ ಪುರಸ್ಕೃತರನ್ನೊಳಗೊಂಡ ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!