ರಾಜ್ಯಸಭೆ 
ದೇಶ

12 ಸಂಸದರ ಅಮಾನತು ರದ್ಧತಿಗೆ ಪ್ರತಿಪಕ್ಷಗಳ ಬಿಗಿಪಟ್ಟು: ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಿಕೆ

12 ಸಂಸದರನ್ನು ಸದನದದಿಂದ ಅಮಾನತು ಮಾಡಿರುವುದನ್ನು ರದ್ದುಪಡಿಸಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಗಿದೆ.

ನವದೆಹಲಿ: 12 ಸಂಸದರನ್ನು ಸದನದದಿಂದ ಅಮಾನತು ಮಾಡಿರುವುದನ್ನು ರದ್ದುಪಡಿಸಬೇಕೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಮಧ್ಯಾಹ್ನ 2 ಗಂಟೆಯವರೆಗೆ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಗಿದೆ.

ಸದನ ಸಮಾವೇಶಗೊಳ್ಳುತ್ತಿದ್ದಂತೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಟಿಆರ್ ಎಸ್, ಆಮ್ ಆದ್ಮಿ ಪಾರ್ಟಿ ಮತ್ತು ಎಡಪಕ್ಷಗಳು ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಮಧ್ಯಾಹ್ನದವರೆಗೂ ಕಲಾಪವನ್ನು ಮುಂದೂಡಲಾಯಿತು.

ಸದನದ ಬಾವಿಗಿಳಿದ ಅನೇಕ ಪ್ರತಿಪಕ್ಷಗಳ ಸದಸ್ಯರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟಿಸಿದರು. ಪ್ರಜಾಪ್ರಭುತ್ವ ಹತ್ಯೆ ಮಾಡಬೇಡಿ, ಸರ್ವಾಧಿಕಾರತ್ವ ಪ್ರಜಾಪ್ರಭುತ್ವದಲ್ಲಿ ನಡೆಯುವುದಿಲ್ಲ ಎಂಬಂತಹ ಭಿತ್ತಿಪತ್ರ ಪ್ರದರ್ಶಿಸಿದರು. 

ಈ ಮಧ್ಯೆ ಪ್ರಶ್ನೋತ್ತರ ಕಲಾಪ ಆರಂಭಿಸಿದ ರಾಜ್ಯಸಭೆ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ , ಸದಸ್ಯರನ್ನು ತಮ್ಮ ಸ್ಥಾನಗಳಿಗೆ ತೆರಳಿ, ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.  ಆದರೆ, ಪ್ರತಿಪಕ್ಷಗಳ ಸದಸ್ಯರು ಕಿವಿಗೂಡದೇ ಗದ್ದಲ, ಗೊಂದಲ ಮುಂದುವರೆದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೂ ರಾಜ್ಯಸಭೆ ಉಪಸಭಾಪತಿ ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT