ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಮೂರು ಡೋಸ್ ಲಸಿಕೆ ಹಾಕಿಸಿಕೊಂಡಿದ್ದ ಜರ್ಮನ್ ವ್ಯಕ್ತಿಗೂ ಕೋವಿಡ್ ಪಾಸಿಟಿವ್

ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಯುರೋಪಿಯನ್ ರಾಷ್ಟ್ರದಲ್ಲಿ ವೈರಾಲಜಿ ಸಂಶೋಧಕರಾಗಿರುವ 28 ವರ್ಷದ ಜರ್ಮನ್ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಭೋಪಾಲ್: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಯುರೋಪಿಯನ್ ರಾಷ್ಟ್ರದಲ್ಲಿ ವೈರಾಲಜಿ ಸಂಶೋಧಕರಾಗಿರುವ 28 ವರ್ಷದ ಜರ್ಮನ್ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಜರ್ಮನ್ ಸಂಶೋಧಕ ಹಾಗೂ ಆತನ ಮಹಿಳಾ ಸಹೋದ್ಯೋಗಿ ಈಗಾಗಲೇ ಕೋವಿಡ್-ವಿರೋಧಿ ಲಸಿಕೆ(ಎರಡು ಸಾಮಾನ್ಯ ಡೋಸ್ ಮತ್ತು ಒಂದು ಬೂಸ್ಟರ್ ಡೋಸ್) ಮೂರು ಡೋಸ್ ಗಳನ್ನು ತೆಗೆದುಕೊಂಡಿದ್ದಾರೆ. ಆದರೂ ಅವರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಭಾರತೀಯ ಸಹೋದ್ಯೋಗಿಯ ವಿವಾಹದಲ್ಲಿ ಪಾಲ್ಗೊಳ್ಳಲು ಈ ಯುವ ಸಂಶೋಧಕ ಮಹಿಳಾ ಸಹೋದ್ಯೋಗಿಯೊಂದಿಗೆ ಭಾನುವಾರ ಜಬಲ್ಪುರಕ್ಕೆ ಆಗಮಿಸಿದ್ದರು.

ಯುವ ಸಂಶೋಧಕರಿಗೆ ರಾಪಿಡ್ ಆಂಟಿಜೆನ್ ಪರೀಕ್ಷೆ(RAT)ಯಲ್ಲಿ ಕೋವಿಡ್ ನೆಗಟಿವ್ ಬಂದಿದೆ. ಆದರೆ ಆರ್ ಟಿಪಿಸಿಆರ್ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿದೆ. ಸಂಶೋಧಕರನ್ನು ಈಗ ಜಬಲ್‌ಪುರ ವೈದ್ಯಕೀಯ ಕಾಲೇಜಿನ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಅವರ ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ.

"ಇದುವರೆಗೆ ಜಬಲ್‌ಪುರದಲ್ಲಿ ಜರ್ಮನ್‌ ವ್ಯಕ್ತಿಯ ಸಂಪರ್ಕಕ್ಕೆ ಬಂದ 40-50 ಜನರನ್ನು ಪತ್ತೆಹಚ್ಚಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರೆಲ್ಲರಿಗೂ ಕೋವಿಡ್ ನೆಗೆಟಿವ್ ಬಂದಿದೆ" ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT