ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸೇನಾ ಹೆಲಿಕಾಪ್ಟರ್ ಪತನ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಸೇರಿ 13 ಮಂದಿ ಸಾವು

ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು,...

ಬಿಪಿನ್ ರಾವತ್
Lingaraj Badiger
Updated On : 8 Dec 2021, 6:51 pm

ಕೊಯಮತ್ತೂರು: ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರ 11 ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

ಇದನ್ನೂ ನೋಡಿ: Photos: ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್, ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ

Advertisement

Advertisement

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ ಅವರನ್ನು ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು(ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.

ತನಿಖೆಗೆ ಆದೇಶ: ತಮಿಳು ನಾಡಿನ ಕೂನೂರು ಬಳಿ ಎಂಐ-17ವಿ5 ಹೆಲಿಕಾಪ್ಟರ್( Mi-17V5 helicopter) ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments