ಅಪಘಾತಕ್ಕೀಡಾದ ಆ್ಯಂಬುಲೆನ್ಸ್ 
ದೇಶ

ಬಿಪಿನ್ ರಾವತ್, ಇತರ ಯೋಧರ ಮೃತದೇಹ ಹೊತ್ತೊಯ್ಯುತ್ತಿದ್ದ ಆ್ಯಂಬುಲೆನ್ಸ್ ಅಪಘಾತ, ಪೊಲೀಸರಿಗೆ ಗಾಯ

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮತ್ತು ಇತರ 11 ಸೇನಾ ಅಧಿಕಾರಿಗಳ ಪಾರ್ಥಿವ ಶರೀರವನ್ನು ಹೊತ್ತೊಯ್ಯುತ್ತಿದ್ದ ಎರಡು...

ಕೊಯಮತ್ತೂರು: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮತ್ತು ಇತರ 11 ಸೇನಾ ಅಧಿಕಾರಿಗಳ ಪಾರ್ಥಿವ ಶರೀರವನ್ನು ಹೊತ್ತೊಯ್ಯುತ್ತಿದ್ದ ಎರಡು ಆಂಬ್ಯುಲೆನ್ಸ್ ಗಳು ತಮಿಳುನಾಡಿನ ಮೆಟ್ಟುಪಾಳ್ಯಂ ಬಳಿ ಗುರುವಾರ ಅಪಘಾತಕ್ಕೀಡಾಗಿವೆ.

ಬಿಪಿನ್ ರಾವತ್ ಸೇರಿದಂತೆ 13 ಮಂದಿಯ ಮೃತದೇಹಗಳನ್ನು ನೀಲಗಿರಿಯ ಎಂಆರ್ ಸಿ ಬ್ಯಾರಕ್ಸ್ ಚೌಕದಿಂದ ಸೂಲೂರು ವಾಯುನೆಲೆಗೆ ಬೆಂಗಾವಲು ಪಡೆಯೊಂದಿಗೆ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಆ್ಯಂಬುಲೆನ್ಸ್ ಮುಂದೆ ಚಲಿಸುತ್ತಿದ್ದ ಮತ್ತೊಂದು ಆ್ಯಂಬುಲೆನ್ಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಲ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 

ತಕ್ಷಣವೇ ಯೋಧರ ಪಾರ್ಥಿವ ಶರೀರವನ್ನು ಬೇರೊಂದು ಆ್ಯಂಬುಲೆನ್ಸ್​ಗೆ ಶಿಫ್ಟ್​ ಮಾಡಿ ಏರ್​ಬೇಸ್​ಗೆ ತರಲಾಗಿದೆ.

ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ