ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೆಹಲಿ: ರೋಹಿಣಿ ಕೋರ್ಟ್ ಸಂಕೀರ್ಣದಲ್ಲಿ ಕಡಿಮೆ ತೀವ್ರತೆಯ ಸ್ಫೋಟ, ನಾಲ್ವರಿಗೆ ಗಾಯ

ರೋಹಿಣಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಗುರುವಾರ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ರೋಹಿಣಿ ಕೋರ್ಟ್ ಆವರಣ
Lingaraj Badiger
Updated On : 9 Dec 2021, 3:00 pm

ನವದೆಹಲಿ: ರೋಹಿಣಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಗುರುವಾರ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಅಗ್ನಿಶಾಮಕ ದಳದ ಪ್ರಕಾರ, ಇಂದು ಬೆಳಗ್ಗೆ 10.40ಕ್ಕೆ ಸ್ಫೋಟಕ್ಕೆ ಸಂಬಂಧಿಸಿದಂತೆ ಫೋನ್ ಕರೆ ಬಂದಿತು, ನಂತರ ಅಗ್ನಿಶಾಮಕ ವಾಹನವು ಸ್ಥಳಕ್ಕೆ ಧಾವಿಸಿತು.

ಸ್ಫೋಟಕ್ಕೆ ನಿಕರವಾದ ಕಾರಣ ಏನು ಎಂಬುದನ್ನು ತಿಳಿಯಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement

ನ್ಯಾಯಾಲಯದ ಕೊಠಡಿ ಸಂಖ್ಯೆ 102ರಲ್ಲಿ ಲ್ಯಾಪ್‌ಟಾಪ್ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.  ಲ್ಯಾಪ್​ಟಾಪ್​ನ ಬ್ಯಾಟರಿ ಸ್ಫೋಟಗೊಂಡು ಈ ಬ್ಲಾಸ್ಟ್​ ಉಂಟಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಕೋರ್ಟ್​ ಆವರಣದಲ್ಲಿ ಉಂಟಾದ ಸ್ಫೋಟದಿಂದಾಗಿ ಅಲ್ಲಿದ್ದ ಜನರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments