ನವದೆಹಲಿಯಲ್ಲಿರುವ ಬಿಪಿನ್ ರಾವತ್ ಅವರ ನಿವಾಸದಲ್ಲಿ ಸೇನಾ ಸಿಬ್ಬಂದಿಗಳು 
ದೇಶ

ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಲೆಫ್ಟಿನೆಂಟ್ ಜನರಲ್ ರಾವತ್ ಹಾಗೂ ಅವರ ಪತ್ನಿ ಅಂತ್ಯಕ್ರಿಯೆ ಶುಕ್ರವಾರ

ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಡೆದ ಹೆಲಿಕಾಫ್ಟರ್ ಪತನದಲ್ಲಿ ಮೃತಪಟ್ಟ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಡಿ.10 ರಂದು ದೆಹಲಿಯ ಕಂಟೋನ್ಮೇಂಟ್ ನಲ್ಲಿ ನಡೆಯಲಿದೆ. 

ನವದೆಹಲಿ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಡೆದ ಹೆಲಿಕಾಫ್ಟರ್ ಪತನದಲ್ಲಿ ಮೃತಪಟ್ಟ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಡಿ.10 ರಂದು ದೆಹಲಿಯ ಕಂಟೋನ್ಮೇಂಟ್ ನಲ್ಲಿ ನಡೆಯಲಿದೆ. 

ಗುರುವಾರ ಸಂಜೆ ವೇಳೆಗೆ ಮೃತರ ಪಾರ್ಥಿವ ಶರೀರ ರಾಷ್ಟ್ರ ರಾಜಧಾನಿ ತಲುಪಲಿದ್ದು, ತಮಿಳುನಾಡಿಗೆ ಏರ್ ಮಾರ್ಷಲ್ ವಿ. ಆರ್ ಚೌಧರಿ ಈಗಾಗಲೇ ತಲುಪಿದ್ದಾರೆ.

ಶುಕ್ರವಾರದಂದು ರಾವತ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗುವುದು ಈ ಬಳಿಕ ಕಾಮರಾಜ್ ಮಾರ್ಗ್ ನಿಂದ ಬ್ರಾರ್ ಸ್ಕ್ವೇರ್ ಚಿತಾಗಾರದವರೆಗೂ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. 

ಜನರಲ್ ರಾವತ್ ಹಾಗೂ ಅವರ ಪತ್ನಿ ಇನ್ನೂ 11 ಮಂದಿ ಸೇನಾ ಅಧಿಕಾರಿಗಳು ರಕ್ಷಣಾ ಕಾಲೇಜಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಯಿಂದ ತಮಿಳುನಾಡಿಗೆ ಸೇನಾ ಹೆಲಿಕಾಫ್ಟರ್ ನಲ್ಲಿ ತೆರಳುತ್ತಿದ್ದಾಗ ಕೂನೂರು ಬಳಿ ಹೆಲಿಕಾಫ್ಟರ್ ಪತನಗೊಂಡು ಈ ದುರ್ಘಟನೆ ನಡೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್