ಶರ್ಜೀಲ್ ಇಮಾಮ್ 
ದೇಶ

2019 ಜಾಮೀಯಾ ಹಿಂಸಾಚಾರ ಪ್ರಕರಣ: ಶರ್ಜೀಲ್ ಇಮಾಮ್ ಗೆ ಜಾಮೀನು ಮಂಜೂರು

ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ 2019 ಡಿಸೆಂಬರ್ ನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಶರ್ಜೀಲ್  ಇಮಾಮ್ ಗೆ ದೆಹಲಿ ನ್ಯಾಯಾಲಯವೊಂದು ಗುರುವಾರ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ 2019 ಡಿಸೆಂಬರ್ ನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಶರ್ಜೀಲ್  ಇಮಾಮ್ ಗೆ ದೆಹಲಿ ನ್ಯಾಯಾಲಯವೊಂದು ಗುರುವಾರ ಜಾಮೀನು ಮಂಜೂರು ಮಾಡಿದೆ.

25 ಸಾವಿರ ಮೊತ್ತದ ಬಾಂಡ್,  ಒಬ್ಬರು ಶ್ಯೂರಿಟಿಯೊಂದಿಗೆ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ದಿನೇಶ್ ಕುಮಾರ್ ಜಾಮೀನು ಮಂಜೂರು ಮಾಡಿದರು. ಅಪರಾಧದ ಸ್ವರೂಪ ಮತ್ತು ತನಿಖೆಯ ಸಮಯದಲ್ಲಿ ಅವರನ್ನು ಬಂಧಿಸದಿರುವ ಅಂಶವನ್ನು ಪರಿಗಣಿಸಿ, ಜಾಮೀನು ಅರ್ಜಿಯನ್ನು ಅನುಮತಿಸಲಾಗಿದೆ ಎಂದು ನ್ಯಾಯಾಧೀಶರು ಆದೇಶಿಸಿದರು.

ಡಿಸೆಂಬರ್ 2019 ರಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ  ವಿರುದ್ಧದ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ ಸಂಭವಿಸಿತ್ತು.  ಐಪಿಸಿ ಸೆಕ್ಷನ್ 124 ಎ( ದೇಶದ್ರೋಹ) 153 ಎ( ಧರ್ಮ, ಬಣ್ಣ, ಹುಟ್ಟಿದ ಸ್ಥಳ, ನಿವಾಸ, ಭಾಷೆ, ಜಾತಿ, ಅಥವಾ ಸಮುದಾಯ ಮತ್ತಿತರ ಆಧಾರದ ಮೇಲೆ ಸೌಹಾರ್ದತೆಗೆ ಭಂಗ ತರುವ ವರ್ತನೆ) ಅಡಿಯಲ್ಲಿ ಶರ್ಜೀಲ್ ಇಮಾಮ್ ಮತ್ತಿತರರ ವಿರುದ್ಧ ದೆಹಲಿ ಪೊಲೀಸರು ಜನವರಿ 25, 2020 ರಲ್ಲಿ ಎಫ್ ಐಆರ್ ದಾಖಲಿಸಿದ್ದರು. ಜನವರಿ 28, 2020ರಲ್ಲಿ ಬಿಹಾರದ ಜಿಹಾನಾಬಾದ್ ನಿಂದ ಶರ್ಜೀಲಾ ಇಮಾಮ್ ಅವರನ್ನು ಬಂಧಿಸಲಾಗಿತ್ತು.

ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಪ್ರದೇಶದಲ್ಲಿ ಶರ್ಜೀಲ್ ಇಮಾಮ್ ಮಾಡಿದ್ದ ಪ್ರಚೋದನಾಕಾರಿ ಭಾಷಣವೇ ಹಿಂಸಾಚಾರಕ್ಕೆ ಕಾರಣ ಎಂಬ ದೆಹಲಿ ಪೊಲೀಸರು ಏಪ್ರಿಲ್ 2020ರಲ್ಲಿ ಆರೋಪಿಸಿದ್ದರು. ಜಾಮೀಯಾ ವಿವಿ ಮತ್ತು ಅಲಿಘಡದಲ್ಲಿ ಶರ್ಜೀಲ್ ಪ್ರಚೋದನಾಕಾರಿ ಭಾಷಣ ಮಾಡಿರುವುದಾಗಿ ದೆಹಲಿ ಅಪರಾಧ ವಿಭಾಗದ ಪೊಲೀಸರು ತನಿಖೆ ವೇಳೆ ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT