ಬಿಪಿನ್ ರಾವತ್ ಪಾರ್ಥಿವ ಶರೀರದ ಅಂತಿಮ ಮೆರವಣಿಗೆ 
ದೇಶ

ನವದೆಹಲಿ: ಸಿಡಿಎಸ್ ಜನರಲ್ ಬಿಪಿನ್ ರಾವತ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭ

ತಮಿಳುನಾಡಿನ ಕೂನೂರನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮದುಲಿಕಾ ರಾವತ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭಗೊಂಡಿದೆ. ಸೇನಾ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಸಾಗುತ್ತಿದೆ. 

ನವದೆಹಲಿ: ತಮಿಳುನಾಡಿನ ಕೂನೂರನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮದುಲಿಕಾ ರಾವತ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭಗೊಂಡಿದೆ. ಸೇನಾ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಸಾಗುತ್ತಿದೆ. 

ಅವರ ನಿವಾಸದಿಂದ ಆರಂಭವಾದ ಅಂತಿಮ ಯಾತ್ರೆ ದೆಹಲಿಯ ಕಂಟೊನ್ಮೆಂಟ್ ನಲ್ಲಿರುವ ಬ್ರಾರ್ ಸ್ಕ್ವೇರ್ ಸಮಾಧಿಯವರೆಗೂ ಸುಮಾರು ಒಂದೂವರೆ ಗಂಟೆಗಳ ಕಾಲ ನಡೆಯಲಿದೆ. ಪಾರ್ಥಿವ ಶರೀರ ಸಾಗುತ್ತಿರುವ ರಸ್ತೆಗಳಲ್ಲಿ ಅಪಾರ ಸಂಖ್ಯೆಯಲ್ಲಿ ಸೇರುತ್ತಿರುವ ಜನರು, ಅಗಲಿದ ಸೇನಾದಂಡನಾಯಕನಿಗೆ ಪುಷ್ಪ ಗೌರವ ಸಲ್ಲಿಸುತ್ತಿದ್ದಾರೆ. 

ಅಪರಾಹ್ನ 3-30 ರಿಂದ ಸಂಬಂಧಿಕರಿಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.  4 ರಿಂದ 4-15ರವರೆಗೆ ಗಣ್ಯರಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 4-15 ರಿಂದ 4-30ರವರೆಗೆ ಅಂತಿಮ ವಿಧಿ ವಿಧಾನ ನೆರವೇರಿಸಲಾಗುತ್ತದೆ. 

 ಬಿಪಿನ್ ರಾವತ್  ಪಾರ್ಥಿವ ಶರೀರದ ಅಂತ್ಯಕ್ರಿಯೆ ವೇಳೆ  ಶ್ರೀಲಂಕಾ, ಭೂತಾನ್, ನೇಪಾಳ ಮತ್ತು ಬಾಂಗ್ಲಾದೇಶದ ಮಿಲಿಟರಿ ಕಮಾಂಡರ್ ಗಳು ಪಾಲ್ಗೊಳ್ಳಲಿದ್ದಾರೆ. ಬಿಪಿನ್ ರಾವತ್ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರದ ವೇಳೆ ಭದ್ರತೆಗಾಗಿ ಸುಮಾರು 800 ಸೇನಾ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT