ಕಾಶ್ಮೀರದಲ್ಲಿ ಉಗ್ರ ದಾಳಿ 
ದೇಶ

ಬಂಡಿಪೋರಾದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರ ಹಾವಳಿ ಹೆಚ್ಚಾಗಿದ್ದು, ಇಂದು ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರ ಹಾವಳಿ ಹೆಚ್ಚಾಗಿದ್ದು, ಇಂದು ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶಾನ್ ಚೌಕ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹ್ಮದ್ ಎಂಬ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾಶ್ಮೀರ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಐಜಿ) ವಿಜಯ್ ಕುಮಾರ್ ಅವರು, 'ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್‌ನಲ್ಲಿ ಶುಕ್ರವಾರ ಮಧ್ಯಾಹ್ನ ಅಪರಿಚಿತ ಉಗ್ರರು ಪೊಲೀಸ್ ಪಡೆಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದರು.ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿತ್ತಾದರೂ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಅಂತೆಯೇ ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!