ರಾವತ್ ದಂಪತಿ ಅಸ್ಥಿ ವಿಸರ್ಜನೆ 
ದೇಶ

ಹೆಲಿಕಾಪ್ಟರ್ ದುರಂತ: ಬಿಪಿನ್​ ರಾವತ್​ ದಂಪತಿ ಅಸ್ಥಿ ವಿಸರ್ಜಿಸಿದ ಪುತ್ರಿಯರು

ಹೆಲಿಕಾಪ್ಟರ್​ ಅಪಘಾತದಲ್ಲಿ ಮರಣ ಹೊಂದಿದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಸ್ಥಿಯನ್ನು ಗಂಗಾ ನದಿಯಲ್ಲಿ ಅವರ ಪುತ್ರಿಯರು ವಿಸರ್ಜಿಸಿದ್ದಾರೆ.

ಹರಿದ್ವಾರ: ಹೆಲಿಕಾಪ್ಟರ್​ ಅಪಘಾತದಲ್ಲಿ ಮರಣ ಹೊಂದಿದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಸ್ಥಿಯನ್ನು ಗಂಗಾ ನದಿಯಲ್ಲಿ ಅವರ ಪುತ್ರಿಯರು ವಿಸರ್ಜಿಸಿದ್ದಾರೆ.

ಇಂದು ಬೆಳಗ್ಗೆ ದೆಹಲಿಯ ಬ್ರಾರ್ ಸ್ಕ್ವೇರ್ ಚಿತಾಗಾರದಿಂದ ತಮ್ಮ ಪೋಷಕರ ಚಿತಾಭಸ್ಮವನ್ನು ರಾವತ್ ಪುತ್ರಿಯರಾದ ಕೃತಿಕಾ ಮತ್ತು ತಾರಿಣಿ ಸಂಗ್ರಹಿಸಿದ್ದರು. ಅಲ್ಲಿಂದ ಉತ್ತರಾಖಂಡದ ಹರಿದ್ವಾರಕ್ಕೆ ಸೇನಾ ಗೌರವದೊಂದಿಗೆ ಚಿತಾಭಸ್ಮವನ್ನು ತಂದು ಗಂಗಾ ನದಿಯಲ್ಲಿ ವಿಸರ್ಜಿಸಿದರು.

ಅಸ್ಥಿ ವಿಸರ್ಜನೆಗೆ ಉತ್ತರಾಖಂಡ ಸರ್ಕಾರದ ಪರವಾಗಿ ಸಂಪುಟದ ಸಚಿವರಾದ ಸ್ವಾಮಿ ಯತೀಶ್ವರಾನಂದ್ ಮತ್ತು ಧನ್ ಸಿಂಗ್ ರಾವತ್ ಆಗಮಿಸಿದ್ದರು. ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ವಿಧಾನಸಭಾ ಸ್ಪೀಕರ್ ಪ್ರೇಮಚಂದ್ ಅಗರ್ವಾಲ್, ಬಿಜೆಪಿ ರಾಜ್ಯಾಧ್ಯಕ್ಷ ಮದನ್ ಕೌಶಿಕ್ ಮತ್ತು ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಕೂಡ ಈ ವೇಳೆ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT