ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 7,774 ಹೊಸ ಕೇಸ್ ಪತ್ತೆ, 306 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7,774 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 306 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7,774 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 306 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,46,90,510ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,71,440ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 92,281ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 8,464 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,41,22,795ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 11,89,459 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 65,58,16,759 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 132.93 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!