ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,350 ಹೊಸ ಪ್ರಕರಣಗಳು, 202 ಮಂದಿ ಸಾವು

ಮೊನ್ನೆ ಶನಿವಾರಕ್ಕಿಂತ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತಗ್ಗಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7 ಸಾವಿರದ 350 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 202 ಮಂದಿ ಮೃತಪಟ್ಟಿದ್ದಾರೆ. 

ನವದೆಹಲಿ: ಮೊನ್ನೆ ಶನಿವಾರಕ್ಕಿಂತ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತಗ್ಗಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7 ಸಾವಿರದ 350 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 202 ಮಂದಿ ಮೃತಪಟ್ಟಿದ್ದಾರೆ. 

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 91 ಸಾವಿರದ 456ಕ್ಕೆ ಇಳಿಕೆಯಾಗಿದ್ದು ಕಳೆದ 561 ದಿನಗಳಲ್ಲಿ ಕಡಿಮೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 7 ಸಾವಿರದ 973 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,41,30,768ಕ್ಕೆ ತಲುಪಿದೆ.

ದೇಶದಲ್ಲಿ ಸೋಂಕಿನಿಂದ ಗುಣಮುಖ ಹೊಂದುತ್ತಿರುವ ಪ್ರಮಾಣ ಶೇಕಡಾ 98.37ರಷ್ಟಿದ್ದು ಮಾರ್ಚ್ 2020ರ ನಂತರ ಅಧಿಕವಾಗಿದೆ. ಭಾರತದಲ್ಲಿ ಇದುವರೆಗೆ 65.66 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 133.17 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!