ದೇಶ

ಡಿ.20ರಿಂದ 'ಹೈ-ರಿಸ್ಕ್' ದೇಶಗಳಿಂದ ಬರುವವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ: ಕೇಂದ್ರ ಸರ್ಕಾರ

Srinivasamurthy VN

ನವದೆಹಲಿ: ಡಿಸೆಂಬರ್ 20ರಿಂದ  'ಹೈ-ರಿಸ್ಕ್' ದೇಶಗಳಿಂದ ಬರುವವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಓಮಿಕ್ರಾನ್ ಸೋಂಕು ಮತ್ತು ಕೊರೊನಾ ಸೋಂಕಿನ ಹೆಚ್ಚಿನ ಸೋಂಕಿನಿಂದ‌ ದೇಶಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ವಿಮಾನ‌ ನಿಲ್ದಾಣದಲ್ಲಿ ಆರ್ ಟಿ ಪಿಸಿ ಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಈ ತಿಂಗಳ 20 ರಿಂದ ದೇಶದ 6 ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.

ಬೆಂಗಳೂರು, ಕೋಲ್ಕತ್ತಾ, ಮುಂಬೈ, ದೆಹಲಿ, ಮುಂಬೈ ,ಕೋಲ್ಕತ್ತಾ,ಚೆನ್ನೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಬರುವ ಎಲ್ಲಾ ಪ್ರಯಾಣಿಕರಿಗೆ ಆರ್ ಟಿ ಪಿಸಿಆರ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಕೇಂದ್ರ ವಿಮಾನಯಾನ ಸಚಿವಾಲಯ ತಿಳಿಸಿದೆ.

ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಆರ್ ಟಿ ಪಿಸಿಆರ್ ಪರೀಕ್ಷೆಯ ಮುಂಚಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ದೇಶದ 6 ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾಯಾನ ನಿರ್ದೇಶನಾಲಯ ತಿಳಿಸಿದೆ. ಏರ್ ಸುವಿಧಾ ಪೋರ್ಟಲ್ ನಲ್ಲಿ ವಿದೇಶಿ ಪ್ರವಾಸಿಗರು ಇದರ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಅತಿ ಹೆಚ್ಚು ಸೋಂಕು ಇರುವ ದೇಶಗಳಲ್ಲಿ ದೇಶಕ್ಕೆ ಬರುವ ಪ್ರಯಾಣಿಕರು 14 ದಿನಗಳ ಕಾಲ ಕ್ವಾಂರಟೈನ್ ನಲ್ಲಿ ಇರಬೇಕು ಎಂದು ಸೂಚಿಸಲಾಗಿದೆ. ಜಗತ್ತಿನ ಹಲವು ದೇಶಗಳು ಭಾರತದ ಕೋವಿಡ್ ಲಸಿಕಾ ಪ್ರಮಾಣಪತ್ರವನ್ನು ಸ್ವೀಕರಿಸಿವೆ.

SCROLL FOR NEXT