ದೇಶ

ದೆಹಲಿಯಲ್ಲಿ ಜನವರಿ 1ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು

Lingaraj Badiger

ನವದೆಹಲಿ: ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿಟಿ)ಯ ನಿರ್ದೇಶನಗಳಿಗೆ ಅನುಸಾರವಾಗಿ, ದೆಹಲಿ ಸರ್ಕಾರ ಜನವರಿ 1, 2022 ರಂದು 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿಯನ್ನು ರದ್ದುಗೊಳಿಸುತ್ತಿದೆ ಮತ್ತು ನಿರಾಕ್ಷೇಪಣೆ ಪ್ರಮಾಣಪತ್ರ(ಎನ್‌ಒಸಿ) ನೀಡುತ್ತದೆ. ಇದರಿಂದ ಅವುಗಳನ್ನು ಇತರ ಸ್ಥಳಗಳಲ್ಲಿ ಮರು ನೋಂದಾಯಿಸಿಕೊಳ್ಳಬಹುದಾಗಿದೆ.

ಆದಾಗ್ಯೂ, ದೆಹಲಿ ಸಾರಿಗೆ ಇಲಾಖೆಯು ಈ ವಾರದ ಆರಂಭದಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಅರ್ಜಿ ಸಲ್ಲಿಸುವ ದಿನಾಂಕದಂದು 15 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ಪೂರೈಸಿದ ಡೀಸೆಲ್ ವಾಹನಗಳಿಗೆ ಯಾವುದೇ ಎನ್ ಒಸಿ ನೀಡಲಾಗುವುದಿಲ್ಲ ಎಂದು ತಿಳಿಸಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ದೆಹಲಿ- NCR (ರಾಷ್ಟ್ರೀಯ ರಾಜಧಾನಿ ಪ್ರದೇಶ) ನಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳ ನೋಂದಣಿ ಮತ್ತು ಓಡಾಟದ ಮೇಲಿನ ನಿರ್ಬಂಧಗಳಿಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ನೀಡಿದೆ.

ಜುಲೈ 2016 ರಲ್ಲಿ ಎನ್ ಜಿಟಿ ನೀಡಿದ ಆದೇಶದಲ್ಲಿ, 10 ವರ್ಷಗಳಿಗಿಂತ ಹೆಚ್ಚು ಹಳೆಯದಾದ ಡೀಸೆಲ್ ವಾಹನಗಳ ನೋಂದಣಿ ರದ್ದುಗೊಳಿಸುವ ನಿರ್ದೇಶನವನ್ನು ತಪ್ಪದೆ ಜಾರಿಗೊಳಿಸಬೇಕು ಎಂದು ಹೇಳಿದೆ.

ಇಲಾಖೆಯು 10 ವರ್ಷಗಳನ್ನು ಪೂರ್ಣಗೊಳಿಸಿದ ಅಥವಾ ಪೂರ್ಣಗೊಳಿಸುವ ದಿನಾಂಕದಂದು 2022ರ ಜನವರಿ 1 ರಂದು ದೆಹಲಿಯಲ್ಲಿ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದುಪಡಿಸುತ್ತಿದೆ ಎಂದು ದೆಹಲಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

SCROLL FOR NEXT