ಶ್ರೀಧರನ್ 
ದೇಶ

ಸಾಕಪ್ಪ ಸಾಕು ಈ ಪಾಲಿಟಿಕ್ಸ್..: ರಾಜಕೀಯಕ್ಕೆ ಮೆಟ್ರೊಮ್ಯಾನ್ ಶ್ರೀಧರನ್ ಗುಡ್ ಬೈ!

'ಮೆಟ್ರೋಮ್ಯಾನ್' ಇ ಶ್ರೀಧರನ್ ಅವರು ರಾಜಕಾರಣದ ಹಾದಿ ಅಷ್ಟು ಸುಲಭವಲ್ಲ ಎಂಬ ಪಾಠ ಕಲಿತಂತಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಪಾಲಕ್ಕಾಡ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು...

ಚೆನ್ನೈ: 'ಮೆಟ್ರೋಮ್ಯಾನ್' ಇ ಶ್ರೀಧರನ್ ಅವರು ರಾಜಕಾರಣದ ಹಾದಿ ಅಷ್ಟು ಸುಲಭವಲ್ಲ ಎಂಬ ಪಾಠ ಕಲಿತಂತಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಪಾಲಕ್ಕಾಡ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ ಇ ಶ್ರೀಧರನ್ ಅವರು ಗುರುವಾರ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.

ಇಂದು ಮಲಪ್ಪುರಂನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶ್ರೀಧರನ್, ಇನ್ನು ಮುಂದೆ ತಾವು ಸಕ್ರಿಯ ರಾಜಕಾರಣದಲ್ಲಿ ಇರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ವಿಧಾನಸಭಾ ಚುನಾವಣೆಯ ಸೋಲಿನಿಂದ ಪಾಠ ಕಲಿತಿದ್ದೇನೆ. ಹೇಗಾದರೂ ಮಾಡಿ ದೇಶ ಸೇವೆ ಮಾಡುತ್ತೇನೆ. ಆದರೆ ರಾಜಕೀಯದಲ್ಲಿ ಇರಲ್ಲ ಎಂದು 89ರ ಹರೆಯದ ತಂತ್ರಜ್ಞ ತಿಳಿಸಿದ್ದಾರೆ.

"ನನ್ನ ದೇಶಕ್ಕೆ ಸೇವೆ ಸಲ್ಲಿಸಲು ನನಗೆ ರಾಜಕೀಯ ಅಗತ್ಯವಿಲ್ಲ. ನಾನು ಈಗಾಗಲೇ ಮೂರು ಟ್ರಸ್ಟ್‌ಗಳ ಮೂಲಕ ಅದನ್ನು ಮಾಡುತ್ತಿದ್ದೇನೆ" ಎಂದು ಅವರು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಶ್ರೀಧರನ್ ಅವರು ಕಾಂಗ್ರೆಸ್ ಅಭ್ಯರ್ಥಿ ಶಫಿ ಪರಂಬಿಲ್ ವಿರುದ್ಧ 3,859 ಮತಗಳ ಅಂತರದಿಂದ ಸೋತಿದ್ದರು. ಶ್ರೀಧರನ್ ಅವರು ಕೇರಳ ವಿಧಾನಸಭೆ ಚುನಾವಣೆಗೂ ಒಂದು ತಿಂಗಳ ಮುನ್ನ ಬಿಜೆಪಿ ಸೇರಿದ್ದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ಶ್ರೀಧರನ್ ಚುನಾವಣೆಗೂ ಮುನ್ನ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT