ಸಾಂದರ್ಭಿಕ ಚಿತ್ರ 
ದೇಶ

ಭಾರತೀಯ ಹೆಣ್ಣುಮಕ್ಕಳ ವಿವಾಹಕ್ಕೆ ಕನಿಷ್ಟ ವಯಸ್ಸು 18 ರಿಂದ 21ಕ್ಕೆ ಹೆಚ್ಚಳ: ಕೇಂದ್ರ ಸಂಪುಟ ಅನುಮೋದನೆ

ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 18ರಿಂದ 21 ವರ್ಷಕ್ಕೆ ಏರಿಸುವ ಪ್ರಸ್ತಾಪವನ್ನು ಬುಧವಾರ ಕೇಂದ್ರ ಸಂಪುಟ ಅಂಗೀಕರಿಸಿದೆ.

ನವದೆಹಲಿ: ಮಹಿಳೆಯರ ಮದುವೆ ವಯಸ್ಸಿನ ಮಿತಿಯನ್ನು 18ರಿಂದ 21 ವರ್ಷಕ್ಕೆ ಏರಿಸುವ ಪ್ರಸ್ತಾಪವನ್ನು ಬುಧವಾರ ಕೇಂದ್ರ ಸಂಪುಟ ಅಂಗೀಕರಿಸಿದೆ.

ಯುವತಿಯರ ಮದುವೆ ವಯಸ್ಸನ್ನು 18ವರ್ಷಕ್ಕೆ ನಿಗದಿಪಡಿಸಲಾಗಿದೆ. ಅದನ್ನು ಮರುಪರಿಶೀಲನೆ ಮಾಡಲಾಗುವುದು. ಇದಕ್ಕಾಗಿ ಒಂದು ಸಮಿತಿ ರಚಿಸಲಾಗುವುದು ಎಂದು 2020ರ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದರು.

ಒಂದೂವರೆ ವರ್ಷದ ಬಳಿಕ ಅದನ್ನೀಗ ಅನುಷ್ಠಾನಕ್ಕೆ ತರಲು ಕೇಂದ್ರ ಸಂಪುಟ ಮುಂದಡಿ ಇಟ್ಟಿದೆ.  ದೇಶದಲ್ಲಿ ಇರುವ ಬಾಣಂತಿ-ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡಲು, ಪೌಷ್ಟಿಕಾಂಶದ ಕೊರತೆ ನೀಗಿಸಲು ಮತ್ತು ಮಹಿಳೆಯರ ಮದುವೆ ವಯಸ್ಸಿನ ಮಿತಿ ಹೆಚ್ಚಿಸುವುದರಿಂದ, ಸಹಜವಾಗಿಯೇ ತಾಯ್ತನದ ವಯಸ್ಸಿನ ಮಿತಿಯೂ ಏರುತ್ತದೆ.

ಹೀಗಾಗಿ ಒಂದಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು  ಅದರ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ಒಂದು ಟಾಸ್ಕ್​ಫೋರ್ಸ್ ರಚಿಸಿತ್ತು. ಈ ಟಾಸ್ಕ್ ಫೋರ್ಸ್​ನ ಶಿಫಾರಸ್ಸಿನ ಅನ್ವಯ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!