ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರದ ಸಾಂಪ್ರದಾಯಿಕ ಎತ್ತಿನಗಾಡಿ ಓಟಕ್ಕೆ ಸುಪ್ರೀಂ ಕೋರ್ಟ್ ಅಸ್ತು

ಮಹಾರಾಷ್ಟ್ರದ ಸಾಂಪ್ರದಾಯಿಕ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.

ಮುಂಬೈ: ಮಹಾರಾಷ್ಟ್ರದ ಸಾಂಪ್ರದಾಯಿಕ ಎತ್ತಿನಗಾಡಿ ಓಟದ ಸ್ಪರ್ಧೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.

ದೇಶದಾದ್ಯಂತ ಇತರ ರಾಜ್ಯಗಳಾದ ಕರ್ನಾಟಕ, ತಮಿಳುನಾಡಿನಲ್ಲಿ ಇದೇ ರೀತಿಯ ಕ್ರೀಡೆಗಳು ನಡೆಯುತ್ತಿರುವಾಗ ಮಹಾರಾಷ್ಟ್ರ ರಾಜ್ಯದಲ್ಲಿ ಮಾತ್ರ ಅದನ್ನು ನಿಷೇಧ ಹೇರಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಹೇಳಿದೆ.

ಮಹಾರಾಷ್ಟ್ರದ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ತಮಿಳುನಾಡು ಮತ್ತು ಕರ್ನಾಟಕ ತಮ್ಮ ತಿದ್ದುಪಡಿಗಳ ಆಧಾರದ ಮೇಲೆ ಪ್ರತಿವರ್ಷ ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ನಡೆಸುತ್ತಿವೆ, ಆದರೆ ಮಹಾರಾಷ್ಟ್ರಕ್ಕೆ ಮಾತ್ರ ಯಾಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.

“ಒಂದು ದೇಶ, ಒಂದು ಜನಾಂಗ, ನಾವು ಏಕರೂಪತೆಯನ್ನು ಹೊಂದಿರಬೇಕು ಮತ್ತು ಒಂದೇ ನಿಯಮ ಇರಬೇಕು. ಬೇರೆ ರಾಜ್ಯಗಳಲ್ಲಿ ರೇಸ್‍ಗಳು ನಡೆಯುತ್ತಿದೆ. ಆದರೆ ಮಹಾರಾಷ್ಟ್ರಕ್ಕೆ ಮಾತ್ರ ಏಕೆ ಅನುಮತಿ ನೀಡಬಾರದು,”ಎಂದು ದ್ವಿಸದಸ್ಯ ಪೀಠದ ನೇತೃತ್ವದ ನ್ಯಾಯಮೂರ್ತಿ ಖಾನ್ವಿಲ್ಕರ್ ಪ್ರಶ್ನಿಸಿದರು.

ಎ ನಾಗರಾಜ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‍ನ 2014 ರ ತೀರ್ಪು ಉಲ್ಲೇಖಿಸಲಾಗಿದೆ, ಇದರಲ್ಲಿ ಜಲ್ಲಿಕಟ್ಟು ನಿಷೇಧಿಸಲಾಗಿದೆ, ಇದು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಪಿಸಿಎ) ಕಾಯ್ದೆಯಡಿಯಲ್ಲಿ ಗೂಳಿಗಳ ಮೇಲಿನ ಕ್ರೌರ್ಯಕ್ಕೆ ಸಮಾನವಾಗಿದೆ.

ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳು 2014ರಲ್ಲಿ ಎಸ್‍ಸಿ ತೀರ್ಪಿನ ನಂತರ ಪಿಸಿಎ ಕಾಯ್ದೆಗೆ ತಿದ್ದುಪಡಿಗಳನ್ನು ತಂದಿದ್ದು, ಜಲ್ಲಿಕಟ್ಟು ಮತ್ತು ಎತ್ತಿನ ಬಂಡಿ ರೇಸ್‍ಗೆ ಅವಕಾಶ ಕಲ್ಪಿಸಲು ಅನುವು ಮಾಡಿಕೊಟ್ಟಿವೆ. ಇವುಗಳನ್ನು ಸಹ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಲಾಗಿದ್ದರೂ, ಸುಪ್ರೀಂ ಕೋರ್ಟ್ ಯಾವುದೇ ಆದೇಶವನ್ನು ನೀಡಲಿಲ್ಲ ಮತ್ತು ಬದಲಿಗೆ ವಿಷಯವನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿತು. ಆದಾಗ್ಯೂ, ಓಟವನ್ನು ಅನುಮತಿಸಲು ಮಹಾರಾಷ್ಟ್ರವು 2017ರಲ್ಲಿ ಪಿಸಿಎ ಕಾಯಿದೆಗೆ ತಿದ್ದುಪಡಿ ಮಾಡಿದ್ದರೂ, ಬಾಂಬೆ ಹೈಕೋರ್ಟ್ ಒಪ್ಪದೆ ಮನವಿಯನ್ನು ತಡೆಹಿಡಿದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!