ಸಂಗ್ರಹ ಚಿತ್ರ 
ದೇಶ

ಕುಲ್ಗಾಂನಲ್ಲಿ ಎನ್ಕೌಂಟರ್: ಸೇನಾಪಡೆ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ರೆದ್ವಾನಿ ಬಾಲಾ ಎಂಬ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ನಿಖರವಾದ ಮಾಹಿತಿಯನ್ನು ಆಧರಿಸಿ, ಯೋಧರು ಆ ಪ್ರದೇಶವನ್ನು ಸುತ್ತುವರೆದಿದ್ದರು. ಈ ವೇಳೆ ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಬುಧವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಉಜ್ರಾಮ್ ಪತ್ರಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನೊಬ್ಬನನ್ನು ಹೊಡೆದುರಳಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!