ದೇಶ

ನಾಚಿಕೆಗೇಡಿನ ವರ್ತನೆ, ಕೂಡಲೇ ಕಾಂಗ್ರೆಸ್ ಕಠಿಣ ಕ್ರಮ ಕೈಗೊಳ್ಳಬೇಕು: ರಮೇಶ್ ಕುಮಾರ್ ಅತ್ಯಾಚಾರ ಹೇಳಿಕೆಗೆ ಜಯಾ ಬಚ್ಚನ್ ಖಂಡನೆ

ಕಾಂಗ್ರೆಸ್ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರ ವಿವಾದಾತ್ಮಕ 'ಅತ್ಯಾಚಾರ' ಹೇಳಿಕೆಗೆ ಸಮಾಜವಾದಿ ಪಕ್ಷದ (ಎಸ್‌ಪಿ) ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಅವರು ಶುಕ್ರವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ಶಾಸಕ ಕೆ.ಆರ್ ರಮೇಶ್ ಕುಮಾರ್ ಅವರ ವಿವಾದಾತ್ಮಕ 'ಅತ್ಯಾಚಾರ' ಹೇಳಿಕೆಗೆ ಸಮಾಜವಾದಿ ಪಕ್ಷದ (ಎಸ್‌ಪಿ) ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಅವರು ಶುಕ್ರವಾರ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಕುಮಾರ್ ಅವರ ಹೇಳಿಕೆ ನಾಚಿಕೆಗೇಡಿನ ವರ್ತನೆಯಾಗಿದೆ. ಪಕ್ಷ ಕೂಡಲೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸದನದಲ್ಲಿದ್ದೇವೆಂಬುದನ್ನು ಮರೆತು ಇಂತಹ ವರ್ತನೆ ತೋರುವ ಇತರರಿಗೆ ಇದು ಉದಾಹರಣೆಯಾಗಬೇಕು ಎಂದು ಹೇಳಿದ್ದಾರೆ.

ಸದನ ಅಥವಾ ಸಂಸತ್ತಿನಲ್ಲಿ ಇಂತಹ ಮನಸ್ಥಿತಿಯುಳ್ಳ ಜನರು ಕುಳಿತುಕೊಂಡರೆ, ಪರಿಸ್ಥಿತಿ ಹೇಗಾಗಬಹುದು? ಯಾರೂ ಈ ರೀತಿ ಮಾತನಾಡಲು ಧೈರ್ಯ ಮಾಡದಂತಹ ಕಠಿಣ ಶಿಕ್ಷೆಯನ್ನು ನೀಡುವ ಮೂಲಕ ನಾವು ಉದಾಹರಣೆಯನ್ನು ಸೃಷ್ಟಿಸಬೇಕು. ಇದು ಅಸಹ್ಯಕರವಾಗಿದೆ, ಹೇಳಿಕೆಯು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಅತ್ಯಾಚಾರದ ಕುರಿತು ಮಾತನಾಡಿದ್ದ ರಮೇಶ್‌ ಕುಮಾರ್, ‘ದೆರ್‌ ಈಸ್‌ ಎ ಸೇಯಿಂಗ್‌, ವೆನ್‌ ರೇಪ್‌ ಈಸ್‌ ಇನೆವಿಟೆಬಲ್‌ ಲೆಟ್‌ ಲೇಡೌನ್‌ ಅಂಡ್‌ ಎಂಜಾಯ್‌’ (ಅಂದರೆ, ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ) ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!

ಏಷ್ಯನ್ ಗೇಮ್ಸ್ 2026: ಚೀನಾ ವಿರುದ್ಧ ಸೋತ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ, ಕಂಚಿನ ಪದಕಕ್ಕೆ ತೃಪ್ತಿ!

ನಾವು 'ಭಯೋತ್ಪಾದನೆಯ ಸಂತ್ರಸ್ತರು, ಆದರೆ ಮಂಡಿಯೂರಿ ಶರಣಾಗಲಿಲ್ಲ; UN ಸಾಮಾನ್ಯ ಸಭೆಯಲ್ಲಿ ಇರಾನ್ ಅಧ್ಯಕ್ಷರ ಪ್ರಬಲ ಭಾಷಣ!

CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್​ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ