ಪಂಜಾಬ್: ಪಾಕ್ ಗಡಿಯಲ್ಲಿ ಡ್ರೋನ್ ಹೊಡೆದುರುಳಿಸಿದ ಗಡಿ ಭದ್ರತಾ ಪಡೆ
ಪಂಜಾಬ್ ನಲ್ಲಿ ಭಾರತ- ಪಾಕಿಸ್ತಾನ ಗಡಿಯಲ್ಲಿ ಡ್ರೋನ್ ವೊಂದನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿರುವುದಾಗಿ ಶನಿವಾರ ಬಿಎಸ್ ಎಫ್ ತಿಳಿಸಿದೆ.
ಚಂಡೀಗಢ: ಪಂಜಾಬ್ ನಲ್ಲಿ ಭಾರತ- ಪಾಕಿಸ್ತಾನ ಗಡಿಯಲ್ಲಿ ಡ್ರೋನ್ ವೊಂದನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿರುವುದಾಗಿ ಶನಿವಾರ ಬಿಎಸ್ ಎಫ್ ತಿಳಿಸಿದೆ.
ಶುಕ್ರವಾರ ರಾತ್ರಿ 11:10 ರ ಸುಮಾರಿನಲ್ಲಿ ಫಿರೋಜ್ಪುರ ಸೆಕ್ಟರ್ನ ವಾನ್ ಗಡಿ ಪೋಸ್ಟ್ ಬಳಿ ಚೀನಾ ನಿರ್ಮಿತ ಡ್ರೋನ್ ನ್ನು ಪತನಗೊಳಿಸಲಾಗಿದೆ.
ಕಪ್ಪು ಬಣ್ಣದ ಹಾರುವ ವಸ್ತುವನ್ನು ಅಂತರರಾಷ್ಟ್ರೀಯ ಗಡಿಯಿಂದ ಸುಮಾರು 300 ಮೀಟರ್ ಮತ್ತು ಗಡಿ ಬೇಲಿಯಿಂದ 150 ಮೀಟರ್ ದೂರದಲ್ಲಿ ಹಾರಾಡುತ್ತಿದ್ದ ಕಪ್ಪು ಬಣ್ಣದ ಡ್ರೋನ್ ನ್ನು ಹೊಡೆದುರುಳಿಸಲಾಗಿದೆ ಎಂದು ಗಡಿ ಭದ್ರತಾ ಪಡೆ ಹೇಳಿಕೆಯಲ್ಲಿ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.