ದೇಶ

ತೆಲಂಗಾಣ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಆರು ಮಂದಿ ದುರ್ಮರಣ, ಹಲವರು ಗಂಭೀರ

Nagaraja AB

ಕಾಮರೆಡ್ಡಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. 

ಜಿಲ್ಲೆಯ ಜಗನ್ನಾಥಪಲ್ಲಿ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಬನ್ಸ್ ವಾಡ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಆಂಧ್ರ ನೋಂದಣಿಯ ಬೊಲೆರೋ ಕಾರು ನಾಂದೇಡ್ ನಿಂದ ಸಂಗರೆಡ್ಡಿ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. 

ಅತಿ ವೇಗವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

SCROLL FOR NEXT