ಸಾಂದರ್ಭಿಕ ಚಿತ್ರ 
ದೇಶ

ಸರ್ಕಾರಿ ಕಾರ್ಯಕ್ರಮಕ್ಕೆ ಗೈರಾದ 11 ಅಧಿಕಾರಿಗಳ ವೇತನ ಸ್ಥಗಿತಗೊಳಿಸುವಂತೆ ಮುಜಾಫರ್‌ನಗರ ಜಿಲ್ಲಾಧಿಕಾರಿ ಆದೇಶ

ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸುವ ಸಲುವಾಗಿ ನಡೆದ 'ಸಂಪೂರ್ಣ ಸಮಾಧಾನ್ ದಿವಸ್‌' ಕಾರ್ಯಕ್ರಮಕ್ಕೆ ಗೈರುಹಾಜರಾದ 11 ಅಧಿಕಾರಿಗಳ ವೇತನ ಸ್ಥಗಿತಗೊಳಿಸುವಂತೆ ಮುಜಾಫರ್‌ನಗರ ಜಿಲ್ಲಾಧಿಕಾರಿ...

ಮುಜಾಫರ್‌ನಗರ: ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸುವ ಸಲುವಾಗಿ ನಡೆದ 'ಸಂಪೂರ್ಣ ಸಮಾಧಾನ್ ದಿವಸ್‌' ಕಾರ್ಯಕ್ರಮಕ್ಕೆ ಗೈರುಹಾಜರಾದ 11 ಅಧಿಕಾರಿಗಳ ವೇತನ ಸ್ಥಗಿತಗೊಳಿಸುವಂತೆ ಮುಜಾಫರ್‌ನಗರ ಜಿಲ್ಲಾಧಿಕಾರಿ ಸಿ ಬಿ ಸಿಂಗ್ ಅವರು ಆದೇಶಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಇಲ್ಲಿನ ಬುಧಾನ ತಹಸಿಲ್ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ 'ಸಂಪೂರ್ಣ ಸಮಾಧಾನ್ ದಿವಸ್‌' ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಮತ್ತು ಎಸ್‌ಎಸ್‌ಪಿ ಅಭಿಷೇಕ್ ಯಾದವ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಜನರಿಂದ 49 ದೂರುಗಳು ಬಂದಿವೆ.

ಈ ವೇಳೆ ವಿವಿಧ ಇಲಾಖೆಗಳ 11 ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದು, ಅವರ ವೇತನವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ