ಶಿವಾಜಿ ಪ್ರತಿಮೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ 
ದೇಶ

ಶಿವಾಜಿ ಪ್ರತಿಮೆ ವಿರೂಪ: ಕನ್ನಡಿಗರದ್ದು ವಿಕೃತ ಮನಸ್ಥಿತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಉದ್ಧವ್ ಠಾಕ್ರೆ ಒತ್ತಾಯ

 ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿರುವವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ  ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮುಂಬೈ: ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿರುವವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ  ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕನ್ನಡಿಗರ ದೌರ್ಜನ್ಯ ಮತ್ತು ವಿಕೃತಿ ಮನಸ್ಥಿತಿ ತಡೆಯಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸುವಂತೆ ಅವರು ಆಗ್ರಹಿಸಿದ್ದಾರೆ. 

ಶಿವಾಜಿ ಮಹಾರಾಜರು ಮಹಾರಾಷ್ಟ್ರಕ್ಕೆ ಮಾತ್ರವಲ್ಲದೇ ಇಡೀ ದೇಶಕ್ಕೆ ದೈವರು, ಮರಾಠ ಸಾಮ್ರಾಜ್ಯದ ಸ್ಥಾಪಕರಿಗೆ ಯಾರೇ ಅಪಮಾನ, ನಿಂದಿಸಿದರೆ ಅದನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.  

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಉದ್ಧವ್ ಠಾಕ್ರೆ, ಶಿವಾಜಿ ಪ್ರತಿಮೆ ವಿರೂಪ ವಿಚಾರದಲ್ಲಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಬೇಕು, ಇದನ್ನು ಲಘುವಾಗಿ ಪರಿಗಣಿಸಬಾರದು, ಕರ್ನಾಟಕದಲ್ಲಿ ಮರಾಠ ಮಾತನಾಡುವ ಜನರು ಅನೇಕ ವರ್ಷಗಳಿಂದ ದೌರ್ಜನ್ಯಕ್ಕೆ ತುತ್ತಾಗಿದ್ದಾರೆ. ಇದೀಗ ಶಿವಾಜಿ ಪ್ರತಿಮೆ ವಿರೂಪಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಮರಾಠಿಗರ ಹೆಮ್ಮೆಯ ಶಿವಾಜಿಗೆ ಅಪಮಾನಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಕೇಂದ್ರ ಸರ್ಕಾರ ಇಬ್ಬಗೆ ನೀತಿಯನ್ನು ಬಿಡಬೇಕು, ಕಠಿಣ ಕ್ರಮ ಕೈಗೊಳ್ಳಬೇಕೆಂದು ಉದ್ದವ್ ಠಾಕ್ರೆ ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

West Asia conflict: ಕುವೈತ್ ಸೇನಾ ತಾಣದ ಮೇಲೆ ಡ್ರೋನ್ ದಾಳಿ; ಯುದ್ಧದಲ್ಲಿ ಹಸ್ತಕ್ಷೇಪ ಮಾಡದಿರಿ- ಇತರೆ ರಾಷ್ಟ್ರಗಳಿಗೆ ಇರಾನ್ ಖಡಕ್ ಎಚ್ಚರಿಕೆ

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿ.ಕೆ ಶಿವಕುಮಾರ್

ನನಗೆ ಇರೋದ್ 5 ಬೆರಳು: ಸಾವಿನ ವದಂತಿ ಮಧ್ಯೆ ಚಹಾ ಕುಡಿಯುತ್ತ ಕಾಣಿಸಿಕೊಂಡ ಇಸ್ರೇಲ್ ಪ್ರಧಾನಿ; ಇರಾನ್‌ಗೆ ಮುಖಭಂಗ; Video

'ಒಂದು ವೇಳೆ ಬದುಕಿದ್ದರೆ, ಹುಡುಕಿ ಕೊಲ್ಲುತ್ತೇವೆ': ಬೆಂಜಮಿನ್ ನೆತನ್ಯಾಹು ಸಾವಿನ ವದಂತಿಗಳ ನಡುವೆ ಇರಾನ್ ಎಚ್ಚರಿಕೆ!

SCROLL FOR NEXT