ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರೊಂದಿಗೆ ಶಾಸಕ ಶಶಿಕಾಂತ್ ದಾಸ್ 
ದೇಶ

ಅಸ್ಸಾಂನ ಮತ್ತೊಬ್ಬ ಕಾಂಗ್ರೆಸ್ ಶಾಸಕ ಬಿಜೆಪಿ ಸೇರುವ ಸಾಧ್ಯತೆ; ಪಕ್ಷಾಂತರವಾಗುತ್ತಿರುವ 'ಕೈ' ಮೂರನೇ ಶಾಸಕ

ಅಸ್ಸಾಂ ನಲ್ಲಿ ಕಾಂಗ್ರೆಸ್ ನೆಲೆಕಳೆದುಕೊಳ್ಳುತ್ತಿದ್ದು, ಪಕ್ಷದ ಮತ್ತೋರ್ವ ಶಾಸಕ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಹಬ್ಬಿದೆ.

ಗುವಾಹಟಿ: ಅಸ್ಸಾಂ ನಲ್ಲಿ ಕಾಂಗ್ರೆಸ್ ನೆಲೆಕಳೆದುಕೊಳ್ಳುತ್ತಿದ್ದು, ಪಕ್ಷದ ಮತ್ತೋರ್ವ ಶಾಸಕ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಹಬ್ಬಿದೆ.

ಮಧ್ಯ ಅಸ್ಸಾಂನ ನಗಾಂವ್ ಜಿಲ್ಲೆಯ ರಾಹಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಶಿಕಾಂತ ದಾಸ್ ಅವರು ಸೋಮವಾರ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಮತ್ತು ಅಸ್ಸಾಂ ರಾಜ್ಯ ಬಿಜೆಪಿ ಅಧ್ಯಕ್ಷ ಭಬೇಶ್ ಕಲಿತಾ ಅವರನ್ನು ಭೇಟಿ ಮಾಡಿ, ರಾಜ್ಯ ಸರ್ಕಾರ ಮತ್ತು ಆಡಳಿತ ಪಕ್ಷದೊಂದಿಗೆ ಕೆಲಸ ಮಾಡಲು ಬಯಸಿದ್ದಾರೆ.

ಕಾಂಗ್ರೆಸ್ ಶಾಸಕ ತಕ್ಷಣ ಬಿಜೆಪಿಗೆ ಸೇರುವುದಿಲ್ಲ. ಅವರು ಆಡಳಿತ ಪಕ್ಷದೊಂದಿಗೆ ಇರುತ್ತಾರೆ ಮತ್ತು ಪಕ್ಷದ ಕಾರ್ಯಾಚರಣೆಗೆ ಸಹಕರಿಸುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹೇಳಿದರು.

ರಾಹಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಶಿಕಾಂತ ದಾಸ್ ಅವರು ನನ್ನನ್ನು ಭೇಟಿ ಮಾಡಿ ಸರ್ಕಾರದೊಂದಿಗೆ ಅತ್ಯಂತ ನಿಕಟವಾಗಿ ಕೆಲಸ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸೋಮವಾರ ಪಕ್ಷದ ಅಧ್ಯಕ್ಷ ಭಾಬೇಶ್ ಕಲಿತಾ ಅವರೊಂದಿಗೆ ಸಮಾಲೋಚನೆ ನಡೆಸಿದ್ದು, ಆ ಸಮಾಲೋಚನೆ ಬಳಿಕ ರಾಹಾ ಕ್ಷೇತ್ರದ ಶಾಸಕರೊಂದಿಗೆ ನಿಕಟವಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ. ಎಲ್ಲಾ ಪ್ರಾಯೋಗಿಕ ಉದ್ದೇಶಗಳಿಗಾಗಿ ಅವರು ನಮ್ಮ ಸರ್ಕಾರದೊಂದಿಗೆ ಬಹಳ ನಿಕಟವಾಗಿ ಕೆಲಸ ಮಾಡುತ್ತಾರೆ ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯಿಂದ ನನಗೆ ಸಂಪೂರ್ಣ ಸಂತೋಷವಾಗಿದೆ ಮತ್ತು ಅವರ ಆಶೀರ್ವಾದದ ಅಗತ್ಯವಿದೆ ಎಂದು ಅವರು ಹೇಳಿದರು. ಅವರು ರಾಜ್ಯ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡಲು ಬಯಸುತ್ತಾರೆ ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದರು.

ಕನಿಷ್ಠ ಆರರಿಂದ ಏಳು ವಿರೋಧ ಪಕ್ಷದ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹೇಳಿದ್ದಾರೆ. ಇದಕ್ಕೂ ಮೊದಲು, ಇಬ್ಬರು ಕಾಂಗ್ರೆಸ್ ಶಾಸಕರಾದ ರೂಪಜ್ಯೋತಿ ಕುರ್ಮಿ ​​ಮತ್ತು ಸುಶಾಂತ ಬೊರ್ಗೊಹೈನ್ ಮತ್ತು ಎಐಯುಡಿಎಫ್‌ನ ಏಕೈಕ ಹಿಂದೂ ಶಾಸಕ ಫಣಿಧರ್ ತಾಲೂಕ್ದಾರ್ ಅವರು ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದ್ದರು. ಉಪಚುನಾವಣೆಯಲ್ಲಿ ಅವರು ಮತ್ತೆ ಬಿಜೆಪಿ ಟಿಕೆಟ್‌ನಲ್ಲಿ ಅಸ್ಸಾಂ ವಿಧಾನಸಭೆಗೆ ಆಯ್ಕೆಯಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ: Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

IPL 2026: ಮತ್ತೆ ಮುಗ್ಗರಿಸಿದ MI, KKRಗೆ 4 ವಿಕೆಟ್ ಜಯ, ಮುಂದುವರೆದ ಪ್ಲೇಆಫ್ ಸಸ್ಪನ್ಸ್!

'ದೇವಸ್ಥಾನಗಳಲ್ಲಿ ಅವಮಾನ ಅನುಭವಿಸಿದ್ದೆ': ಇಸ್ಲಾಂಗೆ ಮತಾಂತರವಾದ ತಮಿಳು ನಟ ಜೈ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

SCROLL FOR NEXT