ಯೂಟ್ಯೂಬ್ ನೋಡಿ ಪತ್ನಿಗೆ ಹೆರಿಗೆ ಮಾಡಲು ಮುಂದಾದ ಪತಿ: ಮಗು ಸಾವು, ಮಹಿಳೆ ಸ್ಥಿತಿ ಗಂಭೀರ!
ಪತಿಯೊಬ್ಬ ತನ್ನ ಹೆಂಡತಿಯ ಹೆರಿಗೆಯನ್ನು ಯೂಟ್ಯೂಬ್ನಲ್ಲಿ ವಿಡಿಯೋ ನೋಡುತ್ತಾ ಮಾಡಲು ಮುಂದಾದ ಪರಿಣಾಮ, ಶಿಶು ಸಾವನ್ನಪ್ಪಿದೆ. ಅಲ್ಲದೇ 28 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಣಿಪೇಟೆ: ವ್ಯಕ್ತಿಯೊಬ್ಬ ಯೂಟ್ಯೂಬ್ ವಿಡಿಯೋ ಸಹಾಯದಿಂದ ತನ್ನ ಪತ್ನಿಯ ಹೆರಿಗೆ ಮಾಡಲು ಯತ್ನಿಸಿದ ಪರಿಣಾಮ, ಶಿಶು ಸಾವನ್ನಪ್ಪಿದೆ. ಅಲ್ಲದೇ 28 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ತಮಿಳುನಾಡಿನ ರಾಣಿಪೇಟೆಯಲ್ಲಿ ನಡೆದಿದೆ. ಮಹಿಳೆ ಹೆಸರು ಗೋಮತಿ ಎಂದು ತಿಳಿದುಬಂದಿದ್ದು, ಹೆರಿಗೆ ಸಮಯದಲ್ಲಿ ಅಪಾರ ರಕ್ತಸ್ರಾವವಾಗಿದೆ. ಹಾಗಾಗಿ ಮಗು ಹುಟ್ಟುವ ಸಮಯದಲ್ಲಿ ಆಕೆ ಪ್ರಜ್ಞಾಹೀನಳಾಗಿದ್ದು, ಬಳಿಕ ಗೋಮತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋಮತಿಯ ಪತಿ ಲೋಗನಾಥನ್ ಅವರು ವೈದ್ಯಕೀಯ ಸಹಾಯ ಪಡೆಯುವ ಬದಲು, ಮನೆಯಲ್ಲಿಯೇ ಹೆರಿಗೆ ಮಾಡಿದ್ದಾರೆ ಎಂದು ಪ್ರಾಥಮಿಕ ಆರೋಗ್ಯ ಅಧಿಕಾರಿ ಮೋಹನ್ ದೂರು ದಾಖಲಿಸಿದ್ದಾರೆ.
ಒಂದು ವರ್ಷದ ಹಿಂದೆ ಲೋಗನಾಥನ್ ಮತ್ತು ಗೋಮತಿ ವಿವಾಹವಾಗಿದ್ದರು. ಅವರು ಡಿಸೆಂಬರ್ 13 ರಂದು ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ, ಡಿಸೆಂಬರ್ 18 ರ ನಂತರ ಗೋಮತಿ ಹೆರಿಗೆ ನೋವು ಕಾಣಿಸಿಕೊಂಡಿದೆ. ಲೋಗನಾಥನ್ ತನ್ನ ಸಹೋದರಿ ಗೀತಾಳ ಸಹಾಯವನ್ನು ಕೋರಿದ್ದು, ಯೂಟ್ಯೂಬ್ನಲ್ಲಿ ವಿಡಿಯೋ ನೋಡಿಕೊಂಡು ಹೆರಿಗೆ ಮಾಡಲು ಪ್ರಯತ್ನಿಸಿದ್ದಾನೆ.
ಗೋಮತಿ ಅವರನ್ನು ಪುನ್ನೈ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (PHC) ಕರೆದೊಯ್ಯಲಾಯಿತು. ನಂತರ ಆಕೆಯನ್ನು ವೆಲ್ಲೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಆಕೆ ಚಿಕಿತ್ಸೆ ಪಡೆಯುತ್ತಿದ್ದಾಳೆ. ಶಿಶು ಸಾವು ಸೇರಿದಂತೆ ಸಂಪೂರ್ಣ ಘಟನೆ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.