ಸಾಂದರ್ಭಿಕ ಚಿತ್ರ 
ದೇಶ

ಖಾಸಗಿ ಫೋಟೋ ತೆಗೆದು ಹಣಕ್ಕೆ ಬೇಡಿಕೆ ಇಟ್ಟವನ ಕೊಂದು ಹೂತು ಹಾಕಿದ ವಿದ್ಯಾರ್ಥಿನಿಯರು!

ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿ ಪ್ರೇಮ್‌ ಕುಮಾರ್‌ನನ್ನು ಕೊಲೆ ಮಾಡಿ, ಆತನ ಶವವನ್ನು ಹೂತು ಹಾಕಿದ್ದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ.

ತಿರುವಳ್ಳೂರು: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿ ಪ್ರೇಮ್‌ ಕುಮಾರ್‌ನನ್ನು ಕೊಲೆ ಮಾಡಿ, ಆತನ ಶವವನ್ನು ಹೂತು ಹಾಕಿದ್ದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಸಹಚರರಾದ ಅಶೋಕ್ ಮತ್ತು ಆತನ ಮೂವರು ಸಹಚರರನ್ನು ಪೊಲೀಸರು ಹುಡುಕುತ್ತಿದ್ದಾರೆ. ಸೋಮವಾರ ಬಾಲಕಿಯರನ್ನು ಬಂಧಿಸಲಾಗಿದೆ.

ಜಿಲ್ಲೆಯ ಈಚಿಂಗಾಡು ಗ್ರಾಮದಲ್ಲಿ ವ್ಯಕ್ತಿಯೊಬ್ಬನ ರಕ್ತಸಿಕ್ತ ಹಲ್ಲು ಮತ್ತು ಕೂದಲು ಇರುವ ಬಗ್ಗೆ ಸ್ಥಳೀಯರು ತಿರುವಳ್ಳೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಹೂತಿದ್ದ ಶವ ಪತ್ತೆಯಾಗಿದೆ. ತನಿಖೆಯ ಸಮಯದಲ್ಲಿ ಪೊಲೀಸರು ಮೃತನ ಮೊಬೈಲ್ ಫೋನ್​​ನನ್ನು ಪತ್ತೆ ಹಚ್ಚಿದ್ದಾರೆ. ಈ ಮೊಬೈಲ್​ ಮುಲಕ ಚೆಂಗಲ್ಪಟ್ಟು ಜಿಲ್ಲೆಯ ಇಬ್ಬರು 10 ನೇ ತರಗತಿಯ ಹುಡುಗಿಯರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಪ್ರೇಮಕುಮಾರ್ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಬಾಲಕಿಯರು ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ.

ಪ್ರೇಮಕುಮಾರ್ ಅವರಿಬ್ಬರ ಜೊತೆ ಸಂಬಂಧ ಬೆಳೆಸಿದ್ದು, ಈ ವಿಚಾರ ಯಾವ ಹುಡುಗಿಯರಿಗೂ ಗೊತ್ತಿರಲಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಬಾಲಕಿಯರ ವೈಯಕ್ತಿಕ ಫೋಟೋಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೇ ಇಬ್ಬರು ಬಾಲಕಿಯರಿಂದ ತಲಾ 50 ಸಾವಿರ ರೂಪಾಯಿ ಸುಲಿಗೆ ಮಾಡಿದ್ದ.

ಪ್ರೇಮಕುಮಾರ್ ಅವರಿಬ್ಬರೊಂದಿಗೆ ಸಂಬಂಧ ಹೊಂದಿದ್ದು, ಹೆಚ್ಚಿನ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದ. ಬಾಲಕಿಯರಿಗೆ ಹಣ ನೀಡಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಅಶೋಕ್ ಎಂಬ ವ್ಯಕ್ತಿ ಪರಿಚಯವಾಗಿದ್ದು, ಹುಡುಗಿಯರು ಆತನ ಬಳಿ ಸಹಾಯವನ್ನು ಕೇಳಿದ್ದಾರೆ. ಅಲ್ಲದೇ ಅವರು ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಆತನಿಗೆ ಹೇಳಿದ್ದಾರೆ.

ಅಶೋಕ್ ಅವರ ಸಲಹೆಯ ಮೇರೆಗೆ ಹುಡುಗಿಯರು ಪ್ರೇಮಕುಮಾರ್‌ಗೆ ಕರೆ ಮಾಡಿ ಶುಕ್ರವಾರ ಸಂಜೆ ಶೋಲವರಂ ಟೋಲ್ ಪ್ಲಾಜಾಕ್ಕೆ ಬರುವಂತೆ ಹೇಳಿ, ನಂತರ ಅವನನ್ನು ಅಪಹರಿಸಿದ್ದಾರೆ. ಪ್ರೇಮಕುಮಾರ್‌ನಿಂದ ಫೋನ್ ಅನ್ನು ತೆಗೆದುಕೊಂಡು, ಅದರಲ್ಲಿರುವ ಫೋಟೋಗಳನ್ನು ಡಿಲೀಟ್​ ಮಾಡಲು ಹುಡುಗಿಯರು ಅಶೋಕ್‌ಗೆ ಹೇಳಿದ್ದಾರೆ. ಆದರೆ ಅವನು ಮತ್ತು ಅವನ ಸಹಚರರು ಬ್ಲ್ಯಾಕ್‌ಮೇಲರ್​​ನನ್ನು ಅಪಹರಿಸಿ, ಈಚಂಗಾಡು ಗ್ರಾಮಕ್ಕೆ ಕರೆದೊಯ್ದು ಕೊಲೆ ಮಾಡಿ ನಂತರ ಶವವನ್ನು ಹೂತು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಶೋಕ್ ಮತ್ತು ಆತನ ಸಹಚರರ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT