ದೇಶ

ಜಮ್ಮು-ಕಾಶ್ಮೀರ: ಪ್ರತ್ಯೇಕ ಘಟನೆಯಲ್ಲಿ ಓರ್ವ ನಾಗರಿಕನ ಹತ್ಯೆ, ಪೊಲೀಸ್ ಗೆ ಗಾಯ

Srinivas Rao BV

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಹತ್ಯೆಗಳ ಸುದ್ದಿ ವರದಿಯಾಗುತ್ತಿದ್ದು, ಡಿ.22 ರಂದು ನಡೆದ ಪ್ರತ್ಯೇಕ ಘಟನೆಗಳಲ್ಲಿ ಓರ್ವ ನಾಗರಿಕನ ಹತ್ಯೆ ಮಾಡಲಾಗಿದ್ದು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. 

ಭಯೋತ್ಪಾದಕರು ಈ ಕೃತ್ಯ ಎಸಗಿದ್ದು, ಕಣಿವೆಯಲ್ಲಿ ಈ ಘಟನೆ ಕೆಲವೇ ನಿಮಿಷಗಳ ಅಂತರದಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ನಗರದ ನವಾಕದಲ್ ಪ್ರದೇಶದಲ್ಲಿ ಓರ್ವ ನಾಗರಿಕನನ್ನು ಹತ್ಯೆ ಮಾಡಲಾಗಿದ್ದರೆ, ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಬಿಜ್ಬೆಹರಾ ಪ್ರದೇಶದಲ್ಲಿ ಉಗ್ರರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. 

ಸಂಜೆ 6 ಗಂಟೆ ವೇಳೆಗೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ರೌಫ್ ಅಹ್ಮದ್ ಎಂಬಾತನ ಮೇಲೆ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಆತನನ್ನು ಎಸ್ಎಂಹೆಚ್ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತ ಬದುಕಿ ಉಳಿಯಲಿಲ್ಲ.     

ಈ ಘಟನೆಯ ಬೆನ್ನಲ್ಲೇ ಉಗ್ರರು ಎಎಸ್ಐ ಮೊಹಮ್ಮದ್ ಅಶ್ರಫ್ ಮೇಲೆ ಬಿಜ್ಬೆಹರಾ ಆಸ್ಪತ್ರೆಯ ಹೊರಭಾಗದಲ್ಲಿ ಗುಂಡಿನ  ದಾಳಿ ನಡೆಸಿದ್ದಾರೆ. ಅದೇ ಆಸ್ಪತ್ರೆಗೆ ಎಎಸ್ಐ ನ್ನು ತಕ್ಷಣವೇ ದಾಖಲಿಸಲಾಯಿತು.  

SCROLL FOR NEXT