ದೇಶ

ಕೇರಳ: ಹಿರಿಯ ಕಾಂಗ್ರೆಸ್ ನಾಯಕ ಪಿ.ಟಿ ಥಾಮಸ್ ನಿಧನ

Shilpa D

ತಿರುವನಂತಪುರಂ: ಕೇರಳದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ತ್ರಿಕಕ್ಕಾರ ಕ್ಷೇತ್ರದ ಶಾಸಕ ಪಿ.ಟಿ ಥಾಮಸ್ (71) ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ವೆಲ್ಲೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದರು. ರಾಜ್ಯದಲ್ಲಿ ಪಕ್ಷದ ಜನಪ್ರಿಯ ನಾಯಕರಲ್ಲಿ ಒಬ್ಬರಾದ ಥಾಮಸ್ ಅವರು ಇತ್ತೀಚೆಗೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕೇರಳದ ಕಾಂಗ್ರೆಸ್‍ನ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾದ ಥಾಮಸ್ 2016 ರಿಂದ ಎರ್ನಾಕುಲಂನ ತ್ರಿಕ್ಕಾಕರ ಅಸೆಂಬ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. 2009 ರಿಂದ 2014ರವರೆಗೆ ಇಡುಕ್ಕಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಥಾಮಸ್ ನಿಧನದಿಂದ ರಾಜ್ಯವು ಅತ್ಯುತ್ತಮ ಸಂಸದೀಯ ಪಟುವನ್ನು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ವ್ಯಕ್ತಪಡಿಸಿದರು. ತಮ್ಮ ಪಕ್ಷದ ನಿಲುವನ್ನು ಲೆಕ್ಕಿಸದೆ ವಿಧಾನಸಭೆಯ ಒಳಗೆ ಮತ್ತು ಹೊರಗೆ ತಮ್ಮ ಸಂಘಟನಾ ಸಾಮರ್ಥ್ಯ ಮತ್ತು ಭಾಷಣಗಳಿಗೆ ಹೆಸರುವಾಸಿಯಾಗಿದ್ದರು ಎಂದು ಥಾಮಸ್ ವ್ಯಕ್ತಿತ್ವವನ್ನು ಕೊಂಡಾಡಿದರು.

ಕಾಂಗ್ರೆಸ್ ಪಕ್ಷದ ಬದ್ಧತೆಯ ನಾಯಕ, ಸಹೋದ್ಯೋಗಿ ಮತ್ತು ಸ್ನೇಹಿತನನ್ನು ಕಳೆದುಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಹೇಳಿದ್ದಾರೆ. 2009-2014 ಇಡುಕ್ಕಿಯಿಂದ ಸಂಸದರಾಗಿ ಸೇವೆ ಸಲ್ಲಿಸಿದ್ದ ಥಾಮಸ್ ತೊಡುಪುಳದಿಂದ (1991-96 ಮತ್ತು 2001-2006) ಶಾಸಕರಾಗಿ ಆಯ್ಕೆಯಾದರು. ಅವರು ಪ್ರಸ್ತುತ ತೃಕ್ಕಕ್ಕರ ಕ್ಷೇತ್ರದ ಹಾಲಿ ಶಾಸಕರಾಗಿದ್ದರು.

SCROLL FOR NEXT