ದೇಶ

ಓಮಿಕ್ರಾನ್ ಹೆಚ್ಚಳ: ಗುಜರಾತ್, ಉತ್ತರ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ಬಳಿಕ ಈಗ ಮಹಾರಾಷ್ಟ್ರದಲ್ಲೂ ನಿರ್ಬಂಧ ಜಾರಿ

Srinivas Rao BV

ಮುಂಬೈ: ಕೊರೋನಾ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ 20 ಕ್ಕಿಂತಲೂ ಹೆಚ್ಚಿನ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದೆ. 

ಹೊಸ ರೂಪಾಂತರಿ ಸೋಂಕು ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು ರಾತ್ರಿ 9 ಗಂಟೆ ನಂತರ ಬೆಳಿಗ್ಗೆ 6 ಗಂಟೆ ವರೆಗೆ 5 ಕ್ಕೂ ಹೆಚ್ಚಿನ ಮಂದಿ ಒಂದೆಡೆ ಸೇರುವುದನ್ನು ನಿರ್ಬಂಧಿಸಲಾಗಿದೆ. ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಡಿ.24 ರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇದೇ ವೇಳೆ ಗುಜರಾತ್, ಮಧ್ಯಪ್ರದೇಶ, ಹರ್ಯಾಣ, ಉತ್ತರ ಪ್ರದೇಶ ರಾಜ್ಯಗಳೂ ಓಮಿಕ್ರಾನ್ ಸೋಂಕು ತಡೆಗೆ ನೈಟ್ ಕರ್ಫ್ಯೂ ಕ್ರಮದ ಮೊರೆ ಹೋಗಿವೆ. ಗುಜರಾತ್ ನ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೆ ಆದೇಶಿಸಲಾಗಿದೆ. ಅಹಮದಾಬಾದ್, ವಡೋದರಾ, ಸೂರತ್, ರಾಜ್ ಕೋಟ್, ಭವ್ ನಗರ್, ಜಾಮ್ ನಗರ, ಗಾಂಧಿನಗರ, ಜುನಾಗಢ್ ಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಗುರುವಾರ ಒಂದೇ ದಿನದಂದು ಗುಜರಾತ್ ನಲ್ಲಿ 7 ಹೊಸ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದವು. 

SCROLL FOR NEXT