ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನದಲ್ಲಿ 21 ಹೊಸ ಓಮಿಕ್ರಾನ್ ಪ್ರಕರಣ ದೃಢ: 43ಕ್ಕೆ ಏರಿಕೆ

ರಾಜಸ್ಥಾನದಲ್ಲಿ ಹೊಸದಾಗಿ 21 ಓಮಿಕ್ರಾನ್ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. 

ಜೈಪುರ: ರಾಜಸ್ಥಾನದಲ್ಲಿ ಹೊಸದಾಗಿ 21 ಓಮಿಕ್ರಾನ್ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. 

ಪುಣೆಯ ನ್ಯಾಷನಲ್ ಇನ್ಸಿಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಮಾದರಿಯ ಪರೀಕ್ಷೆ ನಡೆಸಿದಾಗ 21 ಮಂದಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಲ್ಲಿ 11 ಮಂದಿ ಜೈಪುರ, ಆರು ಮಂದಿ ಅಜ್ಮೀರ್ ಮತ್ತು ಮೂವರು ಉದಯಪುರ, ಒಬ್ಬರು ಮಹಾರಾಷ್ಟ್ರಕ್ಕೆ ಸೇರಿದವರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ವಕ್ತಾರರು ಹೇಳಿದ್ದಾರೆ. 

ಈ ಸೋಂಕಿತರಲ್ಲಿ ಐವರು ವಿದೇಶದಿಂದ ಮರಳಿದವರಾಗಿದ್ದಾರೆ, ಮೂವರು ವಿದೇಶಿ ಪ್ರಯಾಣಿಕರೊಂದಿಗೆ ಸಂಪರ್ಕಕ್ಕೆ ಹೊಂದಿದವರಾಗಿದ್ದಾರೆ. ರಾಜಸ್ಥಾನದಲ್ಲಿ ಸಕ್ರಿಯವಾಗಿರುವ ಕೋವಿಡ್-19 ಪ್ರಕರಣಗಳ ಸಂಖ್ಯೆ 244 ಆಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ