ಸದೈವ ಅಟಲ್ ಸ್ಮಾರಕದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಪುಷ್ಪನಮನ ಸಲ್ಲಿಸುತ್ತಿರುವುದು. 
ದೇಶ

ಅಟಲ್ ಬಿಹಾರಿ ವಾಜಪೇಯಿ 97ನೇ ಜಯಂತಿ: ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಸೇರಿ ಗಣ್ಯರಿಂದ ಪುಷ್ಪನಮನ

ಭಾರತ ರತ್ನ, ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ವಾಜಪೇಯಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಪುಷ್ಪನಮನ ಸಲ್ಲಿಸಿದರು.

ನವದೆಹಲಿ: ಭಾರತ ರತ್ನ, ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ವಾಜಪೇಯಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಪುಷ್ಪನಮನ ಸಲ್ಲಿಸಿದರು.

ದೆಹಲಿಯ ರಾಜ್‍ಘಾಟ್‍ನಲ್ಲಿ ಸದೈವ ಅಟಲ್ ಸ್ಮಾರಕದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ದೇಶದ ಅತ್ಯುತ್ತಮ ಸಂಸದೀಯ ಪಟುವಿಗೆ ಗೌರವ ನಮನ ಸಲ್ಲಿಸಿದರು.

ವಾಜಪೇಯಿಯವರ 97ನೇ ಜಯಂತಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು,  ಗೌರವಾನ್ವಿತ ಅಟಲ್ ಜಿ ಅವರ ಜನ್ಮದಿನದಂದು ಅವರಿಗೆ ನಮನಗಳು. ಅಟಲ್ ಜಿ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇವೆ. ದೇಶಕ್ಕೆ ಅವರ ಶ್ರೀಮಂತ ಸೇವೆಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಅಭಿವೃದ್ಧಿ ಉಪಕ್ರಮಗಳು ಲಕ್ಷಾಂತರ ಭಾರತೀಯರ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT