ದೇಶ

ದೇಶದಲ್ಲಿ ಹೆಚ್ಚಿದ ಓಮಿಕ್ರಾನ್‌ ಆತಂಕ: ಪ್ರಕರಣಗಳ ಸಂಖ್ಯೆ 422ಕ್ಕೆ ಏರಿಕೆ

Manjula VN

ನವದೆಹಲಿ: ಭಾರತದಲ್ಲಿ ಫೆಬ್ರವರಿಯಲ್ಲಿ ಕೊರೋನಾ 3ನೇಅಲೆ ಉತ್ತುಂಗಕ್ಕೆ ತಲುಪಲಿದೆ ಎಂಬ ತಜ್ಞರ ಎಚ್ಚರಿಕೆ ನಡುವೆಯೇ ದೇಶದಲ್ಲಿ ಕೋವಿಡ್‌ ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿನ ಸಂಖ್ಯೆ ಏರುಗತಿಯಲ್ಲಿ ಸಾಗಿದೆ.

ದೇಶಾದ್ಯಂತ ಓಮಿಕ್ರಾನ್‌ ಪ್ರಕರಣಗಳ ಸಂಖ್ಯೆ 422ಕ್ಕೆ ಜಿಗಿದಿದ್ದು, 24 ಗಂಟೆಯಲ್ಲೇ 7ಕ್ಕೂ ಹೆಚ್ಚು ಮಂದಿಗೆ ಈ ಸೋಂಕು ದೃಢಪಟ್ಟಿದೆ. ಕರ್ನಾಟಕ ರಾಜ್ಯದಲ್ಲಿ ಶನಿವಾರ 7 ಮಂದಿಯಲ್ಲಿ ದೃಢಪಟ್ಟಿದೆ, ಈ ನಡುವೆ ಸೋಂಕಿಗೊಳಗಾಗಿರುವ 422 ಮಂದಿಯ ಪೈಕಿ ಈ ವರೆಗೂ 130 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಓಮೈಕ್ರಾನ್‍ಗೆ ಜಾಗತಿಕ ಮಟ್ಟದಲ್ಲಿ ತುತ್ತಾದವರಲ್ಲಿ 10 ಮಂದಿಯಲ್ಲಿ ಒಂಭತ್ತು ಮಂದಿ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದಿದ್ದರು. ಆದ್ದರಿಂದ ಜನರು ಕೋವಿಡ್ ಮಾರ್ಗಸೂಚಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆಯನ್ನು ಮುಂದುವರೆಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಇನ್ನು ಉತ್ತರಪ್ರದೇಶ, ಮಧ್ಯಪ್ರದೇಶ, ಹರ್ಯಾಣಗಳಲ್ಲಿ ರಾತ್ರಿ ಕಫ್ರ್ಯೂ ವಿಧಿಸಲಾಗಿದೆ.

SCROLL FOR NEXT