ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೇರಳ: ಪೊಲೀಸರ ಮೇಲೆ ವಲಸೆ ಕಾರ್ಮಿಕರ ದಾಳಿ: ಅಗ್ನಿಗಾಹುತಿಯಾದ ಪೊಲೀಸ್ ಜೀಪ್ 

ಕೈಟೆಕ್ಸ್ ಎನ್ನುವ ಸಂಸ್ಥೆಗೆ ಸೇರಿದ ಕಾರ್ಮಿಕರ ವಸತಿ ಶಿಬಿರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು.

ಬೆಂಕಿಗಾಹುತಿಯಾದ ಪೊಲೀಸ್ ಜೀಪ್
Harshavardhan M
Updated On : 26 Dec 2021, 11:56 am

ಎರ್ನಾಕುಲಂ: ಪೊಲೀಸರು ಹಾಗೂ ವಲಸೆ ಕಾರ್ಮಿಕರ ನಡುವೆ ಘರ್ಷಣೆ ಸಂಭವಿಸಿದ್ದು, 15ಕ್ಕೂ ಹೆಚ್ಚು ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಕಿಳಕ್ಕಂಬಳಂ ಎಂಬಲ್ಲಿನ ಕಾರ್ಮಿಕರ ಶಿಬಿರದಲ್ಲಿ ಈ ದುರ್ಘಟನೆ ನಡೆದಿದ್ದು ವಲಸೆ ಕಾರ್ಮಿಕರ ಆಕ್ರೋಶಕ್ಕೆ ಪೊಲೀಸ್ ಜೀಪ್ ಬೆಂಕಿಗಾಹುತಿಯಾಗಿದೆ.

ಇದನ್ನೂ ಓದಿ:  ಕೇರಳದ ಬಾಲಕನಿಗೆ ಸಂಕಷ್ಟ; ಮಾನಸಿಕ ಒತ್ತಡದಿಂದ ಪಾರಾಗಲು ನೆರವಾಯ್ತು ಪಠ್ಯದಲ್ಲಿದ್ದ ಸುಧಾಮೂರ್ತಿ ಅವರ ಉಪಾಖ್ಯಾನಗಳು!

ಕೈಟೆಕ್ಸ್ ಎನ್ನುವ ಸಂಸ್ಥೆಗೆ ಸೇರಿದ ಕಾರ್ಮಿಕರ ವಸತಿ ಶಿಬಿರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಪೊಲೀಸರು ಮಧ್ಯ ಪ್ರವೇಶಿಸಿದ್ದರು.

Advertisement

Advertisement

ಇದನ್ನೂ ಓದಿ: ಯಾವ ಜೀವವೂ ಪುಟ್ಟದಲ್ಲ: ಲಿಫ್ಟ್ ಸಂಧಿಯಲ್ಲಿ ಸಿಲುಕಿಕೊಂಡ ಹಕ್ಕಿ ಮರಿ; ಅಗ್ನಿಶಾಮಕ ದಳ ಕಾರ್ಯಾಚರಣೆ

ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ವಲಸೆ ಕಾರ್ಮಿಕರು ಪೊಲೀಸರ ಮೇಲೆ ತಿರುಗಿಬಿದ್ದಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ.

ಇದನ್ನೂ ಓದಿ: ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ವಿರುದ್ಧ ಅರ್ಜಿ: ಕೇರಳ ಹೈಕೋರ್ಟ್ ನಿಂದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments