ಭಾರತೀಯ ಸೇನೆ 
ದೇಶ

ಉಗ್ರರ ವಿರುದ್ಧ ಮುಗಿಬಿದ್ದ ಸೇನೆ; ಕಳೆದ 48 ಗಂಟೆಗಳಲ್ಲಿ ಆರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು

ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಆರು ಭಯೋತ್ಪಾದಕರು ಹತರಾಗಿದ್ದು ಈ ಪೈಕಿ ಓರ್ವ ಪೊಲೀಸ್ ಅಧಿಕಾರಿಯ ಹಂತಕನೂ ಸೇರಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಶ್ರೀನಗರ: ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಆರು ಭಯೋತ್ಪಾದಕರು ಹತರಾಗಿದ್ದು ಈ ಪೈಕಿ ಓರ್ವ ಪೊಲೀಸ್ ಅಧಿಕಾರಿಯ ಹಂತಕನೂ ಸೇರಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅನಂತನಾಗ್ ಗ್ರಾಮದ ಕಲನ್ ಸಿರ್ಗುಫ್ವಾರಾ ಪ್ರದೇಶದಲ್ಲಿ ಭಯೋತ್ಪಾದಕನ ಅಡಗಿರುವ ಬಗ್ಗೆ ನಿಖರ ಮಾಹಿತಿ ಆಧಾರದ ಮೇಲೆ ಜಮ್ಮು ಪೊಲೀಸ್ ಮತ್ತು ಸೇನೆ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಭಯೋತ್ಪಾದಕನ ಉಪಸ್ಥಿತಿಯು ಪತ್ತೆಯಾದ ಕಾರಣ, ಅವರಿಗೆ ಶರಣಾಗಲು ಸಾಕಷ್ಟು ಅವಕಾಶಗಳನ್ನು ನೀಡಲಾಯಿತು. ಇದನ್ನು ಒಪ್ಪದ ಉಗ್ರರು ಸೇನೆ ಮೇಲೆ ಮನಬಂದಂತೆ ಗುಂಡು ಹಾರಿಸಿದರು. ಇದಕ್ಕೆ ಪ್ರತೀಕಾರವಾಗಿ ಸೇನೆ ಸಹ ಗುಂಡಿನ ದಾಳಿ ನಡೆಸಿದ್ದು ಆರು ಮಂದಿ ಹತರಾಗಿದ್ದಾರೆ.

ಕಾಶ್ಮೀರ ಪೊಲೀಸ್ ಇನ್ಸ್‌ಪೆಕ್ಟರ್-ಜನರಲ್ ಮಾಹಿತಿ ನೀಡಿರುವ ಪ್ರಕಾರ, ಮೃತ ಉಗ್ರನನ್ನು ಕಡಿಪೋರಾ ಪ್ರದೇಶದ ನಿವಾಸಿ ಫಹೀಂ ಭಟ್ ಎಂದು ಗುರುತಿಸಲಾಗಿದ್ದು, ಈತ ಬಿಜ್‌ಬೆಹರಾ ಪೊಲೀಸ್ ಠಾಣೆಯ ಎಎಸ್‌ಐ ಮೊಹಮ್ಮದ್ ಅಶ್ರಫ್ ಹತ್ಯೆಯಲ್ಲಿ ಭಾಗಿಯಾಗಿದ್ದ ಎಂದು ತಿಳಿಸಿದ್ದಾರೆ.
ಆತನಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT