ಅಸಾದುದ್ದೀನ್ ಓವೈಸಿ 
ದೇಶ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಸ್ಥಳಗಳ ಮರುನಾಮಕರಣದ ಜ್ವರದಿಂದ ಬಳಲುತ್ತಿದ್ದಾರೆ: ಓವೈಸಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದ ಬಳಲುತ್ತಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಫಿರೋಜಾಬಾದ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದ ಬಳಲುತ್ತಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಫಿರೋಜಾಬಾದ್‌ನಲ್ಲಿ ಆಗಸ್ಟ್-ಸೆಪ್ಟೆಂಬರ್‌ ತಿಂಗಳಲ್ಲಿ ವೈರಲ್ ಜ್ವರದಿಂದ 45 ರಿಂದ 200 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳುತ್ತವೆ. ಆದರೆ, ಈ ಬಗ್ಗೆ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನು ನೀವೇನಾದರೂ ಪ್ರಶ್ನಿಸಿದರೆ, ಜಿಲ್ಲೆಯ ಹೆಸರಿನಿಂದಲೇ ಜಿಲ್ಲೆಗೆ ಜ್ವರ ಬಂದಿದೆ. ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದಲೇ ಬಳಲುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ, ರಾಜ್ಯದಲ್ಲಿ ಶೇ 19ರಷ್ಟಿರುವ ಮುಸ್ಲಿಂ ಜನಸಂಖ್ಯೆಗೆ ಮತ ಚಲಾಯಿಸಲು ಮತ್ತು ತಮ್ಮದೇ ಆದ ರಾಜಕೀಯ ನಾಯಕತ್ವವನ್ನು ಆಯ್ಕೆ ಮಾಡುವ ಬಗ್ಗೆ ಪ್ರಚಾರ ಸಭೆಯಲ್ಲಿ ಓವೈಸಿ ಪುನರುಚ್ಚರಿಸಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT