ಸಾಂದರ್ಭಿಕ ಚಿತ್ರ 
ದೇಶ

15-18 ವರ್ಷದವರಿಗೆ ಸದ್ಯ ಕೋವಾಕ್ಸಿನ್ ಮಾತ್ರ, 2ನೇ ಡೋಸ್ ಆಗಿ 39 ವಾರದ ನಂತರ ಬೂಸ್ಟರ್ ಡೋಸ್

ಎರಡನೇ ಡೋಸ್ ತೆಗೆದುಕೊಂಡು 39 ವಾರ ಆಗಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯ ಸಮಸ್ಯೆಗೊಳಗಾದವರು ಮಾತ್ರ ಜನವರಿ 10 ರಿಂದ ಆರಂಭವಾಗಲಿರುವ ಮೂರನೇ ಡೋಸ್ ಲಸಿಕೆ ತೆಗೆದುಕೊಳ್ಳಲು ಅರ್ಹರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ನವದೆಹಲಿ: ಎರಡನೇ ಡೋಸ್ ತೆಗೆದುಕೊಂಡು 39 ವಾರ ಆಗಿರುವ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಅನಾರೋಗ್ಯ ಸಮಸ್ಯೆಗೊಳಗಾದವರು ಮಾತ್ರ ಜನವರಿ 10 ರಿಂದ ಆರಂಭವಾಗಲಿರುವ ಮೂರನೇ ಡೋಸ್ ಲಸಿಕೆ ತೆಗೆದುಕೊಳ್ಳಲು ಅರ್ಹರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ಜನವರಿ 3 ರಿಂದ 15 -18 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆ ಪ್ರಾರಂಭಿಸಲಾಗುತ್ತಿದ್ದು, ಈ ವಯಸ್ಸಿನ ಗುಂಪಿಗೆ ಕೇವಲ ಕೋವಾಕ್ಸಿನ್ ಮಾತ್ರ ಲಭ್ಯವಿರುವುದಾಗಿ ತಿಳಿಸಿದೆ. 

15-18 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ಹಾಗೂ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕೂ ಮೇಲ್ಪಟ್ಟ ಅನಾರೋಗ್ಯದಿಂದ ಬಳಲುತ್ತಿರುವ ಬೂಸ್ಟರ್ ಡೋಸ್ ನೀಡುವ ಕುರಿತಂತೆ ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, 2007 ಅಥವಾ ಅದಕ್ಕೂ ಮುಂಚೆ ಜನಿಸಿದ ಮಕ್ಕಳು ಕೋ- ವಿನ್ ನಲ್ಲಿ ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ. 

ಸಂಪೂರ್ಣವಾಗಿ ಎರಡು ಡೋಸ್ ಲಸಿಕೆ ಪಡೆದಿರುವ ಆರೋಗ್ಯ, ಫ್ರಂಟ್ ಲೈನ್ ಕಾರ್ಯಕರ್ತರು ಮತ್ತು 60 ವರ್ಷಕ್ಕೂ ಮೇಲ್ಪಟ್ಟ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಿಕೆಯನ್ನು ಪ್ರಾರಂಭಿಸಲಾಗುತ್ತಿದೆ. ಆದರೆ, ಎರಡನೇ ಡೋಸ್ ಪಡೆದ ದಿನಾಂಕದಿಂದ 9 ತಿಂಗಳು ಅಥವಾ 39 ವಾರ ಪೂರ್ಣಗೊಂಡವರಿಗೆ ಮಾತ್ರ ಮೂರನೇ ಡೋಸ್ ನೀಡಲಾಗುವುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. 

60 ವರ್ಷಕ್ಕೂ ಮೇಲ್ಪಟ್ಟವರು ಹಾಗೂ  ಇತರೆ ಅನಾರೋಗ್ಯ ಸಮಸ್ಯೆಗೊಳಗಾದವರಿಗೆ ಎರಡನೇ ಡೋಸ್ ಪಡೆದ 39 ವಾರಗಳ ನಂತರ  ವೈದ್ಯರ ಸಲಹೆ ಮೇರೆಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು,  ಕೋ- ವಿನ್  ಪೋರ್ಟಲ್ ನಲ್ಲಿ ನೋಂದಣಿ ಮತ್ತು ಸೇವೆ ಕಾಯ್ದಿರಿಸುವಿಕೆ ಲಭ್ಯವಿರಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿಯಲ್ಲಿ ಸ್ಪಷ್ಪಪಡಿಸಿದೆ.

15-18 ವರ್ಷದೊಳಗಿನ 8 ಕೋಟಿ ಫಲಾನುಭವಿಗಳು, 3 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕೂ ಮೇಲ್ಪಟ್ಟ ಇತರೆ ಆರೋಗ್ಯ ಸಮಸ್ಯೆಗೊಳಗಾದ  ಸುಮಾರು 10-15 ಕೋಟಿ ಫಲಾನುಭವಿಗಳಿಗೆ ಲಸಿಕೆ ನೀಡಲು ಸರ್ಕಾರ ಎದುರು ನೋಡುತ್ತಿದೆ. ಎಲ್ಲಾ ನಾಗರಿಕರು ಸರ್ಕಾರದ ಕೋವಿಡ್-19 ಲಸಿಕಾ ಕೇಂದ್ರಗಳಲ್ಲಿ  ಉಚಿತ ಲಸಿಕೆ ಪಡೆಯಬಹುದಾಗಿದೆ ಎಂದು ಸರ್ಕಾರ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT