ಸಾಂದರ್ಭಿಕ ಚಿತ್ರ 
ದೇಶ

ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 653ಕ್ಕೆ ಏರಿಕೆ

ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಓಮಿಕ್ರಾನ್ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಿದ್ದು, ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 653ಕ್ಕೇರಿದೆ.

ನವದೆಹಲಿ: ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಓಮಿಕ್ರಾನ್ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಿದ್ದು, ದೇಶದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 653ಕ್ಕೇರಿದೆ.

ಈ ಬಗ್ಗೆ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಮಂಗಳವಾರ ಭಾರತದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 653 ಕ್ಕೇರಿದೆ. ಈ ಪೈಕಿ 186 ಚೇತರಿಸಿಕೊಂಡಿದ್ದು, ಹಲವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಿದೆ.

ದೇಶದ ಒಟ್ಟಾರೆ ಓಮಿಕ್ರಾನ್ ಪ್ರಕರಣಗಳ ಪೈಕಿ ಮಹಾರಾಷ್ಟ್ರದಲ್ಲಿ ಇದುವರೆಗೆ ಅತಿ ಹೆಚ್ಚು 167 ಪ್ರಕರಣಗಳು ವರದಿಯಾಗಿದ್ದು, ದೆಹಲಿ (165) ಮತ್ತು ಕೇರಳ (57) ನಂತರದ ಸ್ಥಾನದಲ್ಲಿವೆ.

ಓಮಿಕ್ರಾನ್ ಪ್ರಕರಣಗಳನ್ನು ವರದಿ ಮಾಡಿರುವ ಇತರ ರಾಜ್ಯಗಳೆಂದರೆ ತೆಲಂಗಾಣ 55, ಗುಜರಾತ್ 49, ರಾಜಸ್ಥಾನ 46, ತಮಿಳುನಾಡು 34 ಮತ್ತು ಕರ್ನಾಟಕದಲ್ಲಿ 31 ಪ್ರಕರಣಗಳು ವರದಿಯಾಗಿದೆ.

ಅಂತೆಯೇ ಮಧ್ಯಪ್ರದೇಶದಲ್ಲಿ 9, ಒಡಿಶಾದಲ್ಲಿ 8, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 6, ಹರಿಯಾಣ ಮತ್ತು ಉತ್ತರಾಖಂಡದಲ್ಲಿ ತಲಾ 4, ಚಂಡೀಗಢ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ 3 ಮತ್ತು ಉತ್ತರ ಪ್ರದೇಶದಲ್ಲಿ 2 ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಗೋವಾ, ಹಿಮಾಚಲ ಪ್ರದೇಶ, ಲಡಾಖ್ ಮತ್ತು ಮಣಿಪುರದಲ್ಲಿ ತಲಾ ಒಂದು ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.

ಏತನ್ಮಧ್ಯೆ, ಭಾರತವು ಕಳೆದ 24 ಗಂಟೆಗಳಲ್ಲಿ 6,358 ಹೊಸ COVID-19 ಪ್ರಕರಣಗಳನ್ನು ಮತ್ತು 6,450 ಚೇತರಿಕೆಗಳನ್ನು ವರದಿ ಮಾಡಿದೆ. ಸಕ್ರಿಯ ಪ್ರಕರಣಗಳು ಪ್ರಸ್ತುತ 75,456ಕ್ಕೇರಿದೆ. ಚೇತರಿಕೆ ದರ ಪ್ರಸ್ತುತ ಶೇ.98.40 ರಷ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT