ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 9,195 ಹೊಸ ಕೇಸ್ ಪತ್ತೆ, 302 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,195 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 302 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಡಿಸೆಂಬರ್ 29) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,195 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 302 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಡಿಸೆಂಬರ್ 29) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,48,08,886ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,80,592ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 77,002ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 7,347 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,42,51,292ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 11,67,612 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 67,52,46,143 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 143.15 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT