ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ ಒಂದೇ ದಿನ 128 ಹೊಸ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆ; ಒಟ್ಟಾರೆ ಸಂಖ್ಯೆ 781ಕ್ಕೆ ಏರಿಕೆ

ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 128 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 781ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 128 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 781ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಬುಧವಾರ ಭಾರತದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 781ಕ್ಕೇರಿದೆ. ಈ ಪೈಕಿ 241 ಚೇತರಿಸಿಕೊಂಡಿದ್ದು, ಹಲವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಹೇಳಿದೆ.

ದೇಶದ ಒಟ್ಟಾರೆ ಓಮಿಕ್ರಾನ್ ಪ್ರಕರಣಗಳ ಪೈಕಿ ದೆಹಲಿಯಲ್ಲಿ ಇದುವರೆಗೆ ಅತಿ ಹೆಚ್ಚು 238 ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರ (167) ಮತ್ತು ಗುಜರಾತ್ (73) ನಂತರದ ಸ್ಥಾನದಲ್ಲಿವೆ.

ಓಮಿಕ್ರಾನ್ ಪ್ರಕರಣಗಳನ್ನು ವರದಿ ಮಾಡಿರುವ ಇತರ ರಾಜ್ಯಗಳೆಂದರೆ ತೆಲಂಗಾಣ 62, ರಾಜಸ್ಥಾನ 46, ಕರ್ನಾಟಕ 34, ತಮಿಳುನಾಡು 34 ಮತ್ತು ಹರಿಯಾಣದಲ್ಲಿ 12 ಪ್ರಕರಣಗಳು ವರದಿಯಾಗಿದೆ.

ಅಂತೆಯೇ ಮಧ್ಯಪ್ರದೇಶದಲ್ಲಿ 9, ಒಡಿಶಾದಲ್ಲಿ 8, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 6, ಹರಿಯಾಣ ಮತ್ತು ಉತ್ತರಾಖಂಡದಲ್ಲಿ ತಲಾ 4, ಚಂಡೀಗಢ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ 3 ಮತ್ತು ಉತ್ತರ ಪ್ರದೇಶದಲ್ಲಿ 2 ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಗೋವಾ, ಹಿಮಾಚಲ ಪ್ರದೇಶ, ಲಡಾಖ್ ಮತ್ತು ಮಣಿಪುರದಲ್ಲಿ ತಲಾ ಒಂದು ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.

ಏತನ್ಮಧ್ಯೆ, ಭಾರತವು ಕಳೆದ 24 ಗಂಟೆಗಳಲ್ಲಿ 9,195 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದ್ದು ಸಕ್ರಿಯ ಪ್ರಕರಣಗಳು ಪ್ರಸ್ತುತ 77,002ಕ್ಕೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!