ಲಸಿಕೆ ಪಡೆಯುತ್ತಿರುವ ಆರೋಗ್ಯ ಕಾರ್ಯಕರ್ತ 
ದೇಶ

ಪಂಜಾಬ್‌: ಜನವರಿ 15 ರಿಂದ ಮಾರುಕಟ್ಟೆ, ಇತರ ಸಾರ್ವಜನಿಕ ಸ್ಥಳ ಪ್ರವೇಶಿಸಲು 2 ಡೋಸ್ ಲಸಿಕೆ ಕಡ್ಡಾಯ

ಪಂಜಾಬ್‌ನಲ್ಲಿ ಜನವರಿ 15 ರಿಂದ ಜಾರಿಗೆ ಬರುವಂತೆ ಸಾರ್ವಜನಿಕ ಸ್ಥಳಗಳಾದ ಮಾರುಕಟ್ಟೆಗಳು, ಮಾಲ್‌ಗಳು, ಹೋಟೆಲ್‌ಗಳು ಮತ್ತು ಸಿನಿಮಾ ಹಾಲ್‌ಗಳನ್ನು ಪ್ರವೇಶಿಸಲು ಸಂಪೂರ್ಣ ಎರಡೂ ಡೋಸ್ ಲಸಿಕೆ ಪಡೆದಿರಬೇಕು...

ಚಂಡೀಗಢ: ಪಂಜಾಬ್‌ನಲ್ಲಿ ಜನವರಿ 15 ರಿಂದ ಜಾರಿಗೆ ಬರುವಂತೆ ಸಾರ್ವಜನಿಕ ಸ್ಥಳಗಳಾದ ಮಾರುಕಟ್ಟೆಗಳು, ಮಾಲ್‌ಗಳು, ಹೋಟೆಲ್‌ಗಳು ಮತ್ತು ಸಿನಿಮಾ ಹಾಲ್‌ಗಳನ್ನು ಪ್ರವೇಶಿಸಲು ಸಂಪೂರ್ಣ ಎರಡೂ ಡೋಸ್ ಲಸಿಕೆ ಪಡೆದಿರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್‌ಗಳು, ಹೋಟೆಲ್‌ಗಳು, ಬಾರ್‌ಗಳು, ರೆಸ್ಟೋರೆಂಟ್‌ಗಳು, ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಸಿನಿಮಾ ಹಾಲ್‌ಗಳು, ಜಿಮ್‌ಗಳು ಮತ್ತು ಫಿಟ್‌ನೆಸ್ ಸೆಂಟರ್‌ಗಳಲ್ಲಿ ಎರಡು ಡೋಸ್ ಲಸಿಕೆ ಹಾಕಿಸಿಕೊಂಡ ವಯಸ್ಕರಿಗೆ ಮಾತ್ರ ಪ್ರವೇಶ ನೀಡುವಂತೆ ಸರ್ಕಾರ ಆದೇಶಿಸಿದೆ.

ರಾಜ್ಯ ಗೃಹ ಸಚಿವಾಲಯ ಮತ್ತು ನ್ಯಾಯ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ, ಚಂಡೀಗಢದಲ್ಲಿರುವ ಎಲ್ಲಾ ಸರ್ಕಾರಿ, ಮಂಡಳಿ ಮತ್ತು ಕಾರ್ಪೊರೇಷನ್ ಕಚೇರಿಗಳಲ್ಲೂ ಸಂಪೂರ್ಣ ಎರಡು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತಿಳಿಸಿದೆ.

"ಕೋವಿಡ್-19 ಸಾಂಕ್ರಾಮಿಕವು ಸಮುದಾಯಕ್ಕೆ ಒಂದು ದೊಡ್ಡ ಸವಾಲಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಅದರಿಂದ ಹೊರಹೊಮ್ಮುವ ಸಮಸ್ಯೆಗಳನ್ನು ಪರಿಗಣಿಸಿ ವಿಶೇಷವಾಗಿ ಓಮೈಕ್ರಾನ್ ಹೊಸ ರೂಪಾಂತರಿ ಕಾರಣದಿಂದಾಗಿ ಸಂಪೂರ್ಣ ಎರಡೂ ಡೋಸ್ ಲಸಿಕೆ ಪಡೆಯದ ವ್ಯಕ್ತಿಗಳು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ" ಎಂದು ಆದೇಶದಲ್ಲಿ ತಿಳಿಸಿದೆ.

"ಸರ್ಕಾರದ ಆದೇಶದ ಪ್ರಕಾರ, ಇನ್ನೂ ಎರಡೂ ಡೋಸ್ ಲಸಿಕೆ ತೆಗೆದುಕೊಳ್ಳದ ವಯಸ್ಕ ವ್ಯಕ್ತಿಗಳು ತಮ್ಮ ನಿವಾಸಗಳಲ್ಲಿಯೇ ಇರಬೇಕು ಮತ್ತು ಯಾವುದೇ ಸಾರ್ವಜನಿಕ ಸ್ಥಳಗಳು/ಮಾರುಕಟ್ಟೆ/ಕಾರ್ಯ/ಸಾರ್ವಜನಿಕ ಸಾರಿಗೆ/ಧಾರ್ಮಿಕ ಸ್ಥಳಗಳು ಇತ್ಯಾದಿಗಳಿಗೆ ಭೇಟಿ ನೀಡಬಾರದು" ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ