ಓಮಿಕ್ರಾನ್ ಹೆಚ್ಚಳ: ಪ್ರಧಾನಿ ಮೋದಿ ಯುಎಇ ಪ್ರವಾಸ ಮುಂದೂಡಿಕೆ
ದೇಶದಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಪ್ರವಾಸ ಮುಂದೂಡಿಕೆಯಾಗಿದೆ.
ನವದೆಹಲಿ: ದೇಶದಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಪ್ರವಾಸ ಮುಂದೂಡಿಕೆಯಾಗಿದೆ.
ಜನವರಿ 6ರಂದು ಪ್ರಧಾನಿ ಮೋದಿ ಯುಎಇ ಮತ್ತು ಕುವೈತ್ ಗೆ ತೆರಳಬೇಕಿತ್ತು. ಆದರೆ ಓಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಿಕೆಯಾಗಿದ್ದು ಫೆಬ್ರವರಿಯಲ್ಲಿ ಮರುದಿನಾಂಕ ನಿಗದಿಯಾಗುವ ಸಾಧ್ಯತೆಗಳಿವೆ ಎಂದು ಸುದ್ದಿ ಸಂಸ್ಧೆ ಪಿಟಿಐ ಟ್ವೀಟ್ ಮಾಡಿದೆ.
ಓಮಿಕ್ರಾನ್ ರೂಪಾಂತರ ಜಗತ್ತಿನಾದ್ಯಂತ ಉಲ್ಬಣಗೊಂಡಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಮೇಲೆ ಈ ವೈರಸ್ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಇನ್ನು ಅಮೆರಿಕಾದಲ್ಲಿ ಡೆಲ್ಟಾಗಿಂತ ಓಮಿಕ್ರಾನ್ ಪ್ರಬಲ ವೈರಸ್ ಆಗಿ ಬದಲಾಗಿದೆ.
ಭಾರತದಲ್ಲಿ ಕೊರೋನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇನ್ನು ಯುಎಇಯಲ್ಲಿ ಸೋಮವಾರ 1,732 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.