ಹೊಸ ವರ್ಷದ ಸಂಭ್ರಮ (ಸಂಗ್ರಹ ಚಿತ್ರ) 
ದೇಶ

ಕೊರೋನಾ ಹೆಚ್ಚಳ: ಮುಂಬೈನಲ್ಲಿ ಹೊಸ ವರ್ಷದ ಪಾರ್ಟಿಗಳಿಗೆ ನಿಷೇಧ, ಸೆಕ್ಷನ್ 144 ಜಾರಿ

ಕೋವಿಡ್-19 ಹೊಸ ರೂಪಾಂತರಿ 'ಓಮೈಕ್ರಾನ್' ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಯಾವುದೇ ಮುಚ್ಚಿದ ಅಥವಾ ತೆರೆದ ಜಾಗದಲ್ಲಿ...

ಮುಂಬೈ: ಕೋವಿಡ್-19 ಹೊಸ ರೂಪಾಂತರಿ 'ಓಮೈಕ್ರಾನ್' ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಬೈ ಪೊಲೀಸರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಯಾವುದೇ ಮುಚ್ಚಿದ ಅಥವಾ ತೆರೆದ ಜಾಗದಲ್ಲಿ ಹೊಸ ವರ್ಷದ ಪಾರ್ಟಿಗಳು ಮತ್ತು ಸಭೆಗಳನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ದೇಶದ ವಾಣಿಜ್ಯ ನಗರಿಯಲ್ಲಿ ಕೋವಿಡ್ ನಿಯಂತ್ರಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಸೆಕ್ಷನ್ 144ರ ಅಡಿಯಲ್ಲಿ ಉಪ ಪೊಲೀಸ್ ಆಯುಕ್ತ (ಕಾರ್ಯಾಚರಣೆ) ಎಸ್ ಚೈತನ್ಯ ಅವರು ಬುಧವಾರ ಈ ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಗುರುವಾರದಿಂದ ಜನವರಿ 7, 2022 ರವರೆಗೆ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ಆದೇಶವು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಬಾರ್‌ಗಳು, ರೆಸಾರ್ಟ್‌ಗಳು ಮತ್ತು ಕ್ಲಬ್‌ಗಳು ಸೇರಿದಂತೆ ಯಾವುದೇ ಮುಚ್ಚಿದ ಅಥವಾ ತೆರೆದ ಜಾಗದಲ್ಲಿ ಹೊಸ ವರ್ಷದ ಆಚರಣೆಗಳು, ಕಾರ್ಯಕ್ರಮಗಳು, ಸಭೆಗಳು ಮತ್ತು ಕೂಟಗಳನ್ನು ನಿಷೇಧಿಸುತ್ತದೆ.

ಬುಧವಾರ ಮುಂಬೈನಲ್ಲಿ 2,510 ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ವರದಿಯಾಗಿದ್ದು, ಇದು ಮೇ 8 ರಿಂದ ಇದುವರೆಗೆ ವರದಿಯಾದ ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT