ದೇಶ

ದೇಶದಲ್ಲಿ ಕೊರೋನಾ ಹೆಚ್ಚಳ: ಆಸ್ಪತ್ರೆಗಳ ಸನ್ನದ್ಧತೆ ಬಲಪಡಿಸುವಂತೆ ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಸೂಚನೆ

Lingaraj Badiger

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಏಕಾಏಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸುವಂತೆ ಮತ್ತು ಲಸಿಕೆ ವ್ಯಾಪ್ತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಎಂಟು ರಾಜ್ಯಗಳಿಗೆ ಸೂಚಿಸಿದೆ.

ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೆಹಲಿ, ಹರಿಯಾಣ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್‌ಗೆ ಪತ್ರ ಬರೆದಿದ್ದು, ಕೋವಿಡ್ -19 ಪರೀಕ್ಷೆಯನ್ನು ಹೆಚ್ಚಿಸಲು, ಆಸ್ಪತ್ರೆಗಳ ಸನ್ನದ್ಧತೆಯನ್ನು ಬಲಪಡಿಸಲು, ವ್ಯಾಕ್ಸಿನೇಷನ್ ವೇಗ ಮತ್ತು ವ್ಯಾಪ್ತಿಯನ್ನು ಹೆಚ್ಚಿಸುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಭಾರತದಲ್ಲಿ ಗುರುವಾರ 13,154 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ 180 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 961ಕ್ಕೆ ಏರಿಕೆಯಾಗಿದೆ.

SCROLL FOR NEXT