ಸಂಗ್ರಹ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿಂದು 16,764 ಹೊಸ ಕೇಸ್ ಪತ್ತೆ, 220 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,764 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 220 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಡಿಸೆಂಬರ್ 31) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,764 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 220 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಡಿಸೆಂಬರ್ 31) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,48,38,804ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,81,080ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 91,361ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 7,585 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,42,66,363ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 11,99,252 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 67,64,45,395 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,43,83,22,742 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್