ಪಾರ್ಲಿಮೆಂಟ್ 
ದೇಶ

ಜುಲೈ 19 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಜುಲೈ19 ಕ್ಕೆ ಪ್ರಾರಂಭವಾಗಲಿದ್ದು, ಆಗಸ್ಟ್ 13 ರಂದು ಮುಕ್ತಾಯವಾಗಲಿದೆ.

ನವದೆಹಲಿ: ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಜುಲೈ19 ಕ್ಕೆ ಪ್ರಾರಂಭವಾಗಲಿದ್ದು, ಆಗಸ್ಟ್ 13 ರಂದು ಮುಕ್ತಾಯವಾಗಲಿದೆ. 17 ನೇ ಲೋಕಸಭೆಯ ಆರನೇ ಅಧಿವೇಶನ ಜುಲೈ 19 ರಂದು ಪ್ರಾರಂಭವಾಗಲಿದ್ದು, ಸರ್ಕಾರಿ ವ್ಯವಹಾರದ ಅಗತ್ಯತೆಗಳಿಗೆ ಒಳಪಟ್ಟು ಅಧಿವೇಶನ ಆಗಸ್ಟ್ 13 ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಲೋಕಸಭಾ ಪ್ರಕಟಣೆ ತಿಳಿಸಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜುಲೈ 19 ರಂದು ಸದನವನ್ನು ಕರೆದಿದ್ದು, ಅಧಿವೇಶನ ಆಗಸ್ಟ್ 13ರವರೆಗೂ ಮುಂದುವರೆಯಲಿದೆ ಎಂದು ರಾಜ್ಯಸಭೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. 

ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಪಿಎ) ಈ ಹಿಂದೆ ಅಧಿವೇಶನ ನಡೆಸಲು ದಿನಾಂಕಗಳನ್ನು ಶಿಫಾರಸು ಮಾಡಿತ್ತು. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು , ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ ನಂತರ ಇದು ಮೊದಲ ಸಂಸತ್ ಅಧಿವೇಶನವಾಗಿದೆ.

ಈ ವರ್ಷದ ಆರಂಭದಲ್ಲಿ ಸಾಂಕ್ರಾಮಿಕ ರೋಗದ ಎರಡನೇ ತರಂಗಕ್ಕೆ ಹೋಲಿಸಿದರೆ ಪ್ರಕರಣಗಳು ತೀವ್ರ ಕುಸಿತ ಕಂಡಿದ್ದರಿಂದ ದೇಶದಲ್ಲಿ ಕೋವಿಡ್ -19 ಪರಿಸ್ಥಿತಿ ತಿಳಿಯಾಗಿದ್ದು,  ವ್ಯಾಕ್ಸಿನೇಷನ್ ಡ್ರೈವ್ ಅನ್ನು ಸಹ ಹೆಚ್ಚಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಮುಂಗಾರು ಅಧಿವೇಶನ ನಡೆದಿದ್ದು, ಚಳಿಗಾಲದ ಅಧಿವೇಶನ ನಡೆದಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!