ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಎನ್ ಕೌಂಟರ್: ಯೋಧ ಹುತಾತ್ಮ, ಮೂರು ಎಲ್ ಇಟಿ ಉಗ್ರರ ಹತ್ಯೆ 

ಕಣಿವೆ ಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಗುಂಡಿನ ಸಪ್ಪಳ ಕೇಳಿಬಂದಿದೆ. ದಾಳಿಯಲ್ಲಿ ಓರ್ವ ಯೋಧರು ಹುತಾತ್ಮರಾಗಿದ್ದು, ಮೂವರು ಎಲ್ ಇಟಿ ಉಗ್ರರು ಹತರಾಗಿದ್ದಾರೆ.

ಜಮ್ಮು: ಕಣಿವೆ ಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಗುಂಡಿನ ಸಪ್ಪಳ ಕೇಳಿಬಂದಿದೆ. ದಾಳಿಯಲ್ಲಿ ಓರ್ವ ಯೋಧರು ಹುತಾತ್ಮರಾಗಿದ್ದು, ಮೂವರು ಎಲ್ ಇಟಿ ಉಗ್ರರು ಹತರಾಗಿದ್ದಾರೆ.

ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಹಂಜಿನ್ ರಾಜ್ ಪೊರಾ ಪ್ರದೇಶದಲ್ಲಿ ಭದ್ರತಾ ಪಡೆ ಯೋಧರು ಮತ್ತು ಎಲ್ ಇಟಿ ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ಹುತಾತ್ಮಗೊಂಡಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಉಗ್ರರ ಇರುವಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸಲು ಆರಂಭಿಸಿದರು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ಮಳೆಗೈಯಲು ಆರಂಭಿಸಿದರು. ಪೊಲೀಸರು ಮತ್ತು ಸೇನಾಪಡೆ ಜಂಟಿಯಾಗಿ ಇಂದು ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿತು.

ಉಗ್ರರ ಇರುವಿಕೆ ಬಗ್ಗೆ ಖಚಿತವಾಗಿ ಮಾಹಿತಿ ಪಡೆದ ಪೊಲೀಸರು ಉಗ್ರರನ್ನು ಶರಣಾಗುವಂತೆ ಕೇಳಿಕೊಂಡರೂ ಒಪ್ಪದೆ ದಾಳಿ ನಡೆಸಿದಾಗ ಎನ್ ಕೌಂಟರ್ ಏರ್ಪಟ್ಟಿತು. ದಾಳಿಯಲ್ಲಿ ಮೂವರು ಉಗ್ರರ ಹತ್ಯೆಯಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಇನ್ನೂ ಆ ಪ್ರದೇಶದಲ್ಲಿ ಎನ್ ಕೌಂಟರ್ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video