ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಕಳೆದ 50 ವರ್ಷಗಳಲ್ಲಿ ಬಿಸಿ ಗಾಳಿಯಿಂದ 17 ಸಾವಿರ ಜನರು ಸಾವು: ಅಧ್ಯಯನ

ದೇಶದ ಖ್ಯಾತ ಹವಾಮಾನ ತಜ್ಞರೊಬ್ಬರು ಇತ್ತೀಚಿಗೆ ಪ್ರಕಟಿಸಿರುವ ಸಂಶೋಧನಾ ಪತ್ರಿಕೆಯೊಂದರ ಪ್ರಕಾರ, ದೇಶದಲ್ಲಿ ಕಳೆದ 50 ವರ್ಷಗಳಲ್ಲಿ 17 ಸಾವಿರಕ್ಕೂ ಹೆಚ್ಚು ಜನರು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. 1971-2019ರವರೆಗೂ 70 ಬಿಸಿಗಾಳಿ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ.

ನವದೆಹಲಿ: ದೇಶದ ಖ್ಯಾತ ಹವಾಮಾನ ತಜ್ಞರೊಬ್ಬರು ಇತ್ತೀಚಿಗೆ ಪ್ರಕಟಿಸಿರುವ ಸಂಶೋಧನಾ ಪತ್ರಿಕೆಯೊಂದರ ಪ್ರಕಾರ, ದೇಶದಲ್ಲಿ ಕಳೆದ 50 ವರ್ಷಗಳಲ್ಲಿ 17 ಸಾವಿರಕ್ಕೂ ಹೆಚ್ಚು ಜನರು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. 1971-2019ರವರೆಗೂ 70 ಬಿಸಿಗಾಳಿ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ.

ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ ರಾಜೀವನ್ ಮತ್ತು ವಿಜ್ಞಾನಿಗಳಾದ ಕಮಲ್ಜಿತ್ ರೇ, ಎಸ್ ಎಸ್ ರೇ, ಆರ್ ಕೆ ಗಿರಿ ಮತ್ತು ಎಪಿ ದಿಮ್ರಿ ಈ ವರ್ಷದ ಆರಂಭದಲ್ಲಿ ಪ್ರಕಟಿಸಿದ ಸಂಶೋಧನಾ ಪತ್ರಿಕೆಯಲ್ಲಿ ಈ ಅಂಶ ತಿಳಿದುಬಂದಿದೆ.

ಬಿಸಿಗಾಳಿ ಹವಾಮಾನ ವೈಫರೀತ್ಯದ ಘಟನೆಗಳಲ್ಲಿ ಒಂದಾಗಿದೆ. ಕಳೆದ 50 ವರ್ಷಗಳಲ್ಲಿ (1971-2019) ಹವಾಮಾನ ವೈಫರೀತ್ಯ ಘಟನೆಗಳಿಂದ 1,41,308 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 17,362 ಜನರು ಬಿಸಿಗಾಳಿಯಿಂದ ಸಾವನ್ನಪ್ಪಿದ್ದಾರೆ. ದಾಖಲಾದ ಒಟ್ಟು ಸಾವುಗಳಲ್ಲಿ ಶೇಕಡಾ 12 ಕ್ಕಿಂತಲೂ ಹೆಚ್ಚಾಗಿರುವುದಾಗಿ ಅಧ್ಯಯನ ಹೇಳಿದೆ.

ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಓಡಿಶಾದಲ್ಲಿ ಗರಿಷ್ಠ ಬಿಸಿಗಾಳಿ ಸಾವು ಪ್ರಕರಣಗಳು ವರದಿಯಾಗಿವೆ. ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ, ದೆಹಲಿ, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಗುಜರಾತ್, ಮಧ್ಯ ಪ್ರದೇಶ, ಮಹಾರಾಷ್ಟ್ರ, ಛತ್ತೀಸ್ ಗಢ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ಅತ್ಯಂತ ಹೆಚ್ಚಿನ ಬಿಸಿಗಾಳಿ ವಲಯಗಳಾಗಿವೆ.

ಉತ್ತರ ಭಾರತದಲ್ಲಿ ಹೆಚ್ಚಿನ ಬಿಸಿಗಾಳಿ ಇರುತ್ತದೆ. ಈ ವಾರದಲ್ಲಿ ಅನೇಕ ಕಡೆಗಳಲ್ಲಿ ಶೇಕಡಾ 40 ಡಿಗ್ರಿಗೂ ಹೆಚ್ಚು ಉಷ್ಣಾಂಶ ದಾಖಲಾಗಿತ್ತು. ಇದರಿಂದಾಗಿ ಸಾವಿನ ಸಂಖ್ಯೆಯಲ್ಲೂ ಹೆಚ್ಚಾಗಿರುವುದನ್ನು ಸಂಶೋಧನಾ ಪತ್ರಿಕೆ ಉಲ್ಲೇಖಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!