ದೇಶ

ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅಧಿಕಾರ ಸ್ವೀಕಾರ

Nagaraja AB

ಡೆಹ್ರಾಡೂನ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಉತ್ತರಾಖಂಡ ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ ಭಾನುವಾರ ಅಧಿಕಾರ ಸ್ವೀಕರಿಸಿದರು.

ಪುಷ್ಕರ್ ಸಿಂಗ್ ಧಮಿ ಕಾಟಿಮಾ ಕ್ಷೇತ್ರದಿಂದ ಎರಡು ಶಾಸಕರಾಗಿದ್ದರೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರಲಿಲ್ಲ ಆದರೆ, ಧಮಿ ಉತ್ತರಾಖಂಡ ರಾಜ್ಯದ ಕಿರಿಯ ವಯಸ್ಸಿನ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ.

ಸುಮಾರು ನಾಲ್ಕು ತಿಂಗಳ ಅವಧಿಯಲ್ಲಿ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರಿ ಸ್ವೀಕರಿಸಿರುವ ಧಮಿ, ಶನಿವಾರ ಉತ್ತರಾಖಂಡ ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಆಯ್ಕೆಯಾಗಿದ್ದರು.

ಮಾಜಿ ಸೈನಿಕನ ಮಗನಾಗಿರುವ ಪುಷ್ಕರ್ ಸಿಂಗ್ ಧಮಿ, ಕಾನೂನು ವಿಷಯದಲ್ಲಿ ಪದವಿ ಪೂರೈಸಿದ್ದು, ಆರ್ ಎಸ್ ಎಸ್ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಉತ್ತರಾಖಂಡ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ 2002 ಮತ್ತು 2008ರಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ.

SCROLL FOR NEXT