ದೇಶ

ಶಿವಸೇನೆ-ಬಿಜೆಪಿ ಶತ್ರುಗಳಲ್ಲ; ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ: ದೇವೇಂದ್ರ ಫಡ್ನವಿಸ್

Vishwanath S

ಮುಂಬೈ: ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಬಿಜೆಪಿ ಮತ್ತು ಮಾಜಿ ಮಿತ್ರ ಶಿವಸೇನೆ 'ಶತ್ರುಗಳಲ್ಲ' ಎಂದು ಹೇಳಿದ್ದಾರೆ. ಆದರೆ ಅವರ ನಡುವೆ ಕೆಲವು ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ರಾಜಕೀಯದಲ್ಲಿ ಯಾವುದೇ 'ಆದರೆ, ಹೋದರೆ'ಗಳಿಗೆ ಜಾಗವಿಲ್ಲ ಎಂದು ಹೇಳಿದರು.

ಇಬ್ಬರು ಮಾಜಿ ಮಿತ್ರಪಕ್ಷಗಳು ಮತ್ತೆ ಒಟ್ಟಿಗೆ ಸೇರುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಫಡ್ನವಿಸ್ ಅವರು, ಪರಿಸ್ಥಿತಿಯನ್ನು ಅವಲಂಬಿಸಿ 'ಸೂಕ್ತ ನಿರ್ಧಾರ' ತೆಗೆದುಕೊಳ್ಳಲಾಗುವುದು ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಇತ್ತೀಚಿನ ಸಭೆ ಮತ್ತು ಬಿಜೆಪಿ ಮತ್ತು ಶಿವಸೇನೆ ಮತ್ತೆ ಒಟ್ಟಿಗೆ ಸೇರುವ ಸಾಧ್ಯತೆಯ ಬಗ್ಗೆ ಕೇಳಿದಾಗ ಫಡ್ನವೀಸ್, 'ರಾಜಕೀಯದಲ್ಲಿ ಯಾವುದೇ ರೀತಿಯ ಆದರೆ, ಹೋದರೆ'ಗೆ ಜಾಗವಿಲ್ಲ. ಚಾಲ್ತಿಯಲ್ಲಿರುವ ಸಂದರ್ಭಗಳಿಗೆ ಅನುಗುಣವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಮಹಾರಾಷ್ಟ್ರ ವಿಧಾನಸಭೆ ಮುಂಗಾರು ಅಧಿವೇಶನದ ಮುನ್ನಾದಿನದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಿನ್ನಾಭಿಪ್ರಾಯಗಳಿದ್ದರೂ ಬಿಜೆಪಿ ಮತ್ತು ಶಿವಸೇನೆ ಶತ್ರುಗಳಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ನಮ್ಮ ಸ್ನೇಹಿತ(ಶಿವಸೇನೆ) ನಮ್ಮೊಂದಿಗೆ 2019ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ ಮತದಾನದ ನಂತರ ಶಿವಸೇನೆ ಯಾರು ತಮ್ಮ ವಿರುದ್ಧ ಸ್ಪರ್ಧಿಸಿದ್ದರೋ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿದೆ ಎಂದರು. 

ವಿಶೇಷವೆಂದರೆ, ಮುಖ್ಯಮಂತ್ರಿ ಹುದ್ದೆ ವಿಷಯವಾಗಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಬೇರೆ ಬೇರೆಯಾದವು. ಶಿವಸೇನಾ ನಂತರ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಕೈಜೋಡಿಸಿ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರವನ್ನು ರಚಿಸಿ ಠಾಕ್ರೆ ಮುಖ್ಯಮಂತ್ರಿಯಾದರು ಎಂದರು. ಇದೇ ವೇಳೆ ಹೈಕೋರ್ಟ್‌ನ ಆದೇಶದ ಮೇರೆಗೆ ಕೇಂದ್ರ ತನಿಖಾ ಸಂಸ್ಥೆಗಳು ಮಹಾರಾಷ್ಟ್ರದಲ್ಲಿ ವಿವಿಧ ಪ್ರಕರಣಗಳನ್ನು ತನಿಖೆ ನಡೆಸುತ್ತಿವೆ. ಅವುಗಳ ಮೇಲೆ ಯಾವುದೇ ರಾಜಕೀಯ ಒತ್ತಡವಿಲ್ಲ ಎಂದು ಫಡ್ನವೀಸ್ ಹೇಳಿದ್ದಾರೆ.

SCROLL FOR NEXT